ಹೈದರಾಬಾದ್: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ; ಸಿಎಂ ರೇವಂತ್ ರೆಡ್ಡಿ ಖಂಡನೆ, ಆರು ಮಂದಿ ಬಂಧನ

ಘಟನೆ ಖಂಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಖಂಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.
Vandalism at Allu Arjun's residence
ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ
Updated on

ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದಿದ್ದ ದುರಂತದಲ್ಲಿ ಮೃತಪಟ್ಟಿದ್ದ ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಒಸ್ಮನಿಯಾ ವಿವಿ ಜಂಟಿ ಕ್ರಿಯಾ ಸಮಿತಿ ಎಂದು ಹೇಳಿಕೊಂಡ ಗುಂಪೊಂದು ಭಾನುವಾರ ನಟ ಅಲ್ಲು ಅರ್ಜುನ್ ಅವರ ನಿವಾಸದ ಬಳಿ ಹೂವಿನ ಕುಂಡಗಳು ಮತ್ತಿತರ ವಸ್ತುಗಳನ್ನು ಧ್ವಂಸಗೊಳಿಸಿ ಪುಂಡಾಟ ಮೆರೆದಿತ್ತು.

ಈ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಖಂಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.

ನಟ ಅಲ್ಲು ಅರ್ಜುನ್ ನಿವಾಸದ ಬಳಿ ಬಂದ ಪ್ರತಿಭಟನಾಕಾರರು, ಮನೆ ಮೇಲೆ ಕಲ್ಲು ತೂರಾಟ ಮತ್ತು ಟೊಮೆಟೋ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ. ಕೆಲವು ಹೂ ಕುಂಡಗಳನ್ನು ಧ್ವಂಸಗೊಳಿಸಿದ್ದಾರೆ. ಸುದ್ದಿ ತಿಳಿದು ಜುಬಿಲಿ ಹಿಲ್ಸ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಧ್ವಂಸದಲ್ಲಿ ಪಾಲ್ಗೊಂಡ ಆರು ಮಂದಿ ಮತ್ತಿತರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾನೂನುಬಾಹಿರ ವರ್ತನೆ ಸಹಿಸಲು ಸಾಧ್ಯವಿಲ್ಲ. ಪ್ರತಿಭಟನಾಕಾರರು ಅಲ್ಲು ಅರ್ಜುನ್ ವಿರುದ್ಧ ಘೋಷಣೆ ಕೂಗಿ ಮೃತ ಮಹಿಳೆ ಕುಟುಂಬಕ್ಕೆ ರೂ. 1 ಕೋಟಿ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಸಿನಿಮಾ ಮಾಡಿ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡ್ತಾರೆ. ಸಿನಿಮಾ ನೋಡುವವರು ಸಾಯುತ್ತಿದ್ದಾರೆ ಎಂಬ ಫಲಕವನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದಾಗ ಅಲ್ಲು ಅರ್ಜುನ್ ಮನೆಯಲ್ಲಿ ಇರಲಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ಲೋಪವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ನಮ್ಮ ಮನೆಯ ಹೊರಗೆ ನಡೆದದ್ದನ್ನು ನೀವು ನೋಡಿದ್ದೀರಿ, ಆದರೆ ಇದು ನಾವು ಸಂಯಮದಿಂದ ವರ್ತಿಸುವ ಸಮಯ, ಇದಕ್ಕೆಲ್ಲ ನಾವು ಈಗ ಪ್ರತಿಕ್ರಿಯಿಸಬಾರದು, ಪೊಲೀಸರು ಬಂದು ಅವರನ್ನು ಕರೆದೊಯ್ದರು. ಅವರು ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಗೆ ಯಾರಾದರೂ ತೊಂದರೆ ಕೊಡಲು ಬಂದರೆ ಕರೆದುಕೊಂಡು ಹೋಗಲು ಪೊಲೀಸರು ಸಿದ್ಧರಿದ್ದಾರೆ. ಇಂತಹ ಘಟನೆಗಳನ್ನು ಯಾರೂ ಪ್ರೋತ್ಸಾಹಿಸಬಾರದು. ಇದಕ್ಕೆ ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ತಿಳಿಸಿದರು.

Vandalism at Allu Arjun's residence
Pushpa 2: Allu Arjun ಮನೆ ಬಳಿ ಹೈಡ್ರಾಮಾ, ಟೊಮೊಟೋ, ಕಲ್ಲೆಸೆತ, ನಟನ ವಿರುದ್ಧ ಘೋಷಣೆ, ವ್ಯಾಪಕ ಆಕ್ರೋಶ! Video

ಈ ಮಧ್ಯೆ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ವಿಷ್ಣು ಮೂರ್ತಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಕ್ಕಾಗಿ ಡಿಜಿಪಿಗೆ ವರದಿಯನ್ನು ರವಾನಿಸಲಾಗುತ್ತಿದೆ. ಡಿಜಿಪಿ ಕಚೇರಿ ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ವಲಯದ ಡಿಸಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಲ್ತುಳಿತದ ಬಗ್ಗೆ ಕಾಳಜಿ ವಹಿಸದ ಪೊಲೀಸ್ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಪ್ರತಿಕ್ರಿಯಿಸದಂತೆ ನೋಡಿಕೊಳ್ಳಬೇಕು ಎಂದು ರೆಡ್ಡಿ ಹೇಳಿದ್ದಾರೆ. ಮೂರ್ತಿ ಅವರು ಉನ್ನತ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಅಥವಾ ಯಾವುದೇ ಹಿರಿಯ ಅಧಿಕಾರಿಯನ್ನು ಸಂಪರ್ಕಿಸದೆ ಸುದ್ದಿಗೋಷ್ಠಿ ನಡೆಸಿ, ಅಲ್ಲು ಅರ್ಜುನ್ ವಿರುದ್ಧ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com