
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ) ಬಳಿ ಮಂಗಳವಾರ ಸಂಜೆ ಸೇನಾ ವಾಹನ ಪಲ್ಟಿಯಾಗಿ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೈಟ್ ನೈಟ್ ಕಾರ್ಪ್ಸ್ ತನ್ನ X ಖಾತೆಯ ಮೂಲಕ ಸಾವುನೋವುಗಳನ್ನು ಖಚಿತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಗಾಯಗೊಂಡಿರುವ ಸೇನಾ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಇಂದು ಸಂಜೆ 5:40 ರ ಸುಮಾರಿಗೆ 11 ಮರಾಠಾ ಲಘು ಪದಾತಿ ದಳದ ಸೇನಾ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಎಲ್ಒಸಿ ಮೂಲಕ ಬಲ್ನೋಯಿ ಘೋರಾ ಪೋಸ್ಟ್‌ಗೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಘೋರಾ ಪೋಸ್ಟ್ ಬಳಿಯ ಕಮರಿಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ವಾಹನವು ಸುಮಾರು 150 ಅಡಿಗಳಷ್ಟು ಆಳದ ಕಮರಿಗೆ ಬಿದ್ದಿದೆ ಎಂದು ವರದಿಯಾಗಿದೆ. ಚಾಲಕ ಸೇರಿದಂತೆ 10 ಸೈನಿಕರು ಗಂಭೀರ ಗಾಯಗೊಂಡಿದ್ದಾರೆ.
Advertisement