ವಕ್ಫ್ ಆಸ್ತಿ ವಿವಾದ: ರಾಜ್ಯ ಸರ್ಕಾರದ ಅಧಿಕಾರಿಗಳು ನಾಳೆ ಸಂಸದೀಯ ಸಮಿತಿ ಮುಂದೆ ಹಾಜರು
ನವದೆಹಲಿ: ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದದ ನಡುವೆ, ರಾಜ್ಯ ಸರ್ಕಾರದ ಅಧಿಕಾರಿಗಳು ಗುರುವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ನಿರ್ಧರಿಸಿದ್ದಾರೆ.
ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಗುರುವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಒಡಿಶಾ ಮತ್ತು ದೆಹಲಿ ಸರ್ಕಾರಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದೆ.
ದೆಹಲಿ ಆಹಾರ ಮತ್ತು ಸರಬರಾಜು ಸಚಿವ ಇಮ್ರಾನ್ ಹುಸೇನ್ ಅವರು ಶುಕ್ರವಾರ ಸಮಿತಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿ ಸರ್ಕಾರದ ಪ್ರತಿನಿಧಿಗಳು ಸಾಕ್ಷ್ಯವನ್ನು ದಾಖಲಿಸಿದ್ದಾರೆ.
ರಾಜ್ಯದಲ್ಲಿ ರೈತರ 1500 ಎಕರೆಗೂ ಹೆಚ್ಚು ಭೂಮಿಯನ್ನು ವಕ್ಫ್ ಬೋರ್ಡ್ ವಶಪಡಿಸಿಕೊಳ್ಳುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಸಮಿತಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ವಕ್ಫ್ ಆಸ್ತಿ ವಿವಾದದ ನಂತರ ಜಗದಾಂಬಿಕಾ ಪಾಲ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು ಮತ್ತು ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಸಂಬಂಧ ರಾಜ್ಯ ಸರ್ಕಾರದಿಂದ ನೋಟಿಸ್ ಪಡೆದಿದ್ದ ರೈತರೊಂದಿಗೆ ಸಂವಾದ ನಡೆಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ