ಮಾಜಿ ಪ್ರಧಾನಿ Dr. Manmohan Singh ನಿಧನ; ಆರ್ಥಿಕ ಸುಧಾರಣೆಯ ಹರಿಕಾರ ಇನ್ನಿಲ್ಲ!

ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.
Dr.Manmohan Singh
ಡಾ.ಮನಮೋಹನ್ ಸಿಂಗ್ online desk
Updated on

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.

ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.

ಡಾ.ಮನಮೋಹನ್ ಸಿಂಗ್ ರಾಜಕೀಯ ಜೀವನ

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.

ಸಿಂಗ್ ಅವರ ರಾಜಕೀಯ ಜೀವನು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.

6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.

ಅಸ್ಸಾಂ ನಿಂದ 5 ಬಾರಿ ಹಾಗೂ ಅಲ್ಪಾವಧಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು.

Dr.Manmohan Singh
ರಾಷ್ಟ್ರಪತಿ ಚುನಾವಣೆ; ವ್ಹೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

RBI ಗವರ್ನರ್ ಆಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್

1932 ರ ಸೆ.26 ರಂದು ಅಂದಿನ ಅವಿಭಜಿತ ಭಾರತದಲ್ಲಿ ಜನಿಸಿದ ಡಾ. ಮನಮೋಹನ್ ಸಿಂಗ್, 1972 ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ 1982-1985 ಅವಧಿಯಲ್ಲಿ ಆರ್ ಬಿಐ ಗವರ್ನರ್ ಆಗಿಯೂ ಕಾರ್ಯನಿರ್ವಹಿಸಿದ್ದರು.

ಅಸಾಧಾರಣ ಶೈಕ್ಷಣಿಕ ಹಿನ್ನೆಲೆಯೊಂದಿಗೆ, ಸಿಂಗ್ BA ಮತ್ತು MA ಎರಡರಲ್ಲೂ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಗ್ರಸ್ಥಾನ ಪಡೆದಿದ್ದರು. ಕೇಂಬ್ರಿಡ್ಜ್‌ನಲ್ಲಿ ಹೆಚ್ಚಿನ ಅಧ್ಯಯನವನ್ನು ಪಡೆದ ಅವರು, ಆಕ್ಸ್‌ಫರ್ಡ್‌ನಿಂದ ಡಾಕ್ಟರೇಟ್ ಪದವಿ ಗಳಿಸಿದರು. ಹಣಕಾಸು ಸಚಿವರಾಗಿ, ಅವರು ಭಾರತವನ್ನು ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಂಸೆ ಗಳಿಸಿದ್ದರು. ಇನ್ನೊಂದು ಸದನದಲ್ಲಿ ಮತದಾನದ ವೇಳೆ ಎದುರಾಳಿಗಳು ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ’ ಎಂದು ಮೋದಿ ನೆನಪಿಸಿಕೊಂಡಿದ್ದು ಗಮನಾರ್ಹ

ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com