ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ: ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.
Manmohan Singh
ಮನಮೋಹನ್ ಸಿಂಗ್
Updated on

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಬಂದಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಮಾರಕ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಿದ್ದಾರೆಂದು ತಿಳಿಸಿದೆ.

ಸ್ಮಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

Manmohan Singh
ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು: ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ ಆರಂಭ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೇತೃತ್ವ ವಹಿಸಿ, ಆರ್ಥಿಕ ಸುಧಾರಣೆಗಳ ಹರಿಕಾರ ಎಂದು ಗುರುತಿಸಿಕೊಂಡಿರುವ ಸಿಂಗ್ ಅವರು ಗುರುವಾರ 92 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 2004 ರಿಂದ 2014ರ ವರೆಗೆ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಡಾ. ಮನಮೋಹನ್​ ಸಿಂಗ್​ ಅವರು ಗಣನೀಯ ಸೇವೆ ಸಲ್ಲಿಸಿದ್ದರು.

ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್‌ನ ಮನವಿಯನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ನಿರಾಕರಿಸಿತ್ತು. ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತದ ಮೊದಲ ಸಿಖ್ ಪ್ರಧಾನಿಗೆ ಉದ್ದೇಶಪೂರ್ವಕ ಅವಮಾನ” ಎಂದು ಟ್ವೀಟ್‌ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಅತಿ ಗಣ್ಯರಿಗೆ ಮೀಸಲಾದ ಸ್ಥಳದಲ್ಲಿ ಗೌರವ ಸಂಪ್ರದಾಯಗಳೊಂದಿಗೆ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಡೆಸುವಂತೆ ಮನವಿ ಮಾಡಿದರು. ಈ ಬೆಳವಣಿಗೆ ನಂತರ ತಡರಾತ್ರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com