
ಉಜ್ಜೈನ್: ಉಜ್ಜೈನ್ ನಲ್ಲಿರುವ ಮಹಾಕಾಲ ಮಂದಿರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೆರಳಿದ್ದು ಪೂಜೆ ಸಲ್ಲಿಸಿದ್ದಾರೆ.
ರಾಜನಾಥ್ ಸಿಂಗ್ ಅವರೊಂದಿಗೆ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಸಹ ಪೂಜೆ ಸಲ್ಲಿಸಿದ್ದು ಇದು ಈಗ ರಾಜಕೀಯ ತಿರುವು ಪಡೆದುಕೊಂಡಿದೆ.
ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜನಾಥ್ ಸಿಂಗ್, "ದೀರ್ಘಕಾಲದ ಆಸೆ ಇತ್ತು, ಈಗ ಆಶೀರ್ವಾದ ಪಡೆದಿದ್ದೇನೆ" ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರೊಂದಿಗೆ ಸೇನಾ ಮುಖ್ಯಸ್ಥರು ಭೇಟಿ ನೀಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸೇನೆಯನ್ನು ಕೇಸರಿಕರಣಗೊಳಿಸುವ ಹುನ್ನಾರ ಎಂದು ಆರೋಪಿಸಿವೆ.
Advertisement