ಕೇಂದ್ರ ಬಜೆಟ್: ಹಾಲು, ಡೈರಿ ಉತ್ಪಾದನೆ ಹೆಚ್ಚಿಸುವ ಯೋಜನೆ ಪ್ರಕಟಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ.
ಹಾಲಿನ ಸಾಂದರ್ಭಿಕ ಚಿತ್ರ
ಹಾಲಿನ ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ.

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೆ ಕಡಿಮೆ ಉತ್ಪಾದಕತೆ ಹೊಂದಿದೆ. ಹೀಗಾಗಿ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ಹೇಳಿದ್ದಾರೆ.

2022-23ರಲ್ಲಿ ಭಾರತದ ಹಾಲಿನ ಉತ್ಪಾದನೆಯು 230.58 ಮಿಲಿಯನ್ ಟನ್‌ಗಳಿಗೆ ಅಂದರೆ ಶೇ. 4 ರಷ್ಟು ಏರಿಕೆಯಾಗಿದೆ.

ಎಣ್ಣೆಕಾಳುಗಳ ಉತ್ಪಾದನೆಗೆ ಆತ್ಮ ನಿರ್ಭರತ್ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೃಷಿ ವಲಯದಲ್ಲಿ ಮೌಲ್ಯವರ್ಧನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳನ್ನು ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com