ಜ್ಞಾನವಾಪಿ ಮಸೀದಿ: ವ್ಯಾಸ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಹಿಂದೂಗಳು

ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ

ವಾರಣಾಸಿ: ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ರಾತ್ರಿ ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ನಾಗೇಂದ್ರ ಪಾಂಡೆ ಅವರು ಗುರುವಾರ ತಿಳಿಸಿದ್ದಾರೆ.

ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಗೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ದೊಡ್ಡ ಜಯ ಸಿಕ್ಕಿದ್ದು, ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿತ್ತು.

ನಿನ್ನೆ ರಾತ್ರಿ 10.30 ರ ಸುಮಾರಿಗೆ "31 ವರ್ಷಗಳ ನಂತರ ಪ್ರಾರ್ಥನೆಗಾಗಿ ವ್ಯಾಸ ನೆಲಮಾಳಿಗೆಯನ್ನು ತೆರೆಯಲಾಯಿತು" ಎಂದು ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ನೆಲಮಾಳಿಗೆಯಲ್ಲಿ ಪ್ರಾರ್ಥನೆ ನಡೆಸಲಾಗಿದೆಯೇ ಎಂದು ಕೇಳಿದಾಗ, ಅವರು "ಹೌದು" ಎಂದು ಹೇಳಿದರು. "ನ್ಯಾಯಾಲಯದ ಆದೇಶವನ್ನು ಅನುಸರಿಸುವುದು ಅಗತ್ಯವಾಗಿತ್ತು. ಆದ್ದರಿಂದ ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಅತ್ಯಂತ ತ್ವರಿತವಾಗಿ ಮಾಡಿದೆ" ಎಂದು ಪಾಂಡೆ ಹೇಳಿದ್ದಾರೆ.

ಇನ್ನೂ ನ್ಯಾಯಾಲಯದ ಆದೇಶವನ್ನು ಪಾಲಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಸ್.ರಾಜಲಿಂಗಂ ಅವರು ತಿಳಿಸಿದ್ದಾರೆ.

ನೆಲಮಾಳಿಗೆಯನ್ನು ಸ್ವಚ್ಛಗೊಳಿಸಿದ ನಂತರ, ಲಕ್ಷ್ಮಿ ದೇವಿ ಮತ್ತು ಗಣೇಶನ ಆರತಿಯನ್ನು ಮಾಡಲಾಯಿತು ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com