ಮೋದಿ ಎಫೆಕ್ಟ್: ಲಕ್ಷದ್ವೀಪಕ್ಕೆ ಹೆಚ್ಚುವರಿ ಮೂಲಸೌಕರ್ಯ; ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಉ್ಲಲೇಖ!

ಲಕ್ಷದ್ವೀಪ ಸೇರಿ ನಮ್ಮ ದ್ವೀಪಗಳಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಲಕ್ಷದ್ವೀಪ ಸೇರಿ ನಮ್ಮ ದ್ವೀಪಗಳಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಲಕ್ಷದ್ವೀಪ ದೇಶದ ಜನಪ್ರಿಯ ಪ್ರವಾಸಿ ತಾಣವಾಗಿ ಪರಿಣಮಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಮ್ಮ ಆರ್ಥಿಕ ಬಲ ದೇಶವನ್ನು ಉದ್ಯಮ ಹಾಗೂ ಕಾನ್ಫರೆನ್ಸ್ ಪ್ರವಾಸೋದ್ಯಮಕ್ಕೆ ಆಕರ್ಷಣೀಯವನ್ನಾಗಿ ಮಾಡಿದೆ ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. 

ಜ.04 ರಂದು ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ತೆರಳಿದ್ದರು ಈ ಬೆನ್ನಲ್ಲೇ ಅಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. 

ಲಕ್ಷದ್ವೀಪ ಬೀಚ್ ಗೆ ತೆರಳಿದ್ದ ಫೋಟೊಗಳನ್ನು ಪ್ರಧಾನಿ ಮೋದಿ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆನ್ನಲ್ಲೇ ಮಾಲ್ಡೀವ್ಸ್ ನ ಸಚಿವರು ಹಾಗೂ ಇನ್ನಿತರ ನಾಯಕರು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. 

ಪರಿಣಾಮ ಮಾಲ್ಡೀವ್ಸ್ ಗೆ ಪ್ರವಾಸಕ್ಕೆಂದು ಯೋಜನೆ ರೂಪಿಸಿದ್ದ ಭಾರತೀಯರು ಅದನ್ನು ವಾಪಸ್ ಪಡೆದು, ಲಕ್ಷದ್ವೀಪಕ್ಕೆ ಪ್ರವಾಸಕ್ಕೆ ಹೆಚ್ಚು ತೆರಳಲು ಪ್ರಾರಂಭಿಸಿದ್ದಾರೆ. 

ಆಧ್ಯಾತ್ಮಿಕ ಪ್ರವಾಸೋದ್ಯಮ ಸೇರಿದಂತೆ ಪ್ರವಾಸೋದ್ಯಮವು ಸ್ಥಳೀಯ ಉದ್ಯಮಶೀಲತೆಗೆ ಅಪಾರ ಅವಕಾಶಗಳನ್ನು ಹೊಂದಿದೆ ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

"ಪ್ರವಾಸಿ ಕೇಂದ್ರಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ರಾಜ್ಯಗಳನ್ನು ಉತ್ತೇಜಿಸಲಾಗುವುದು, ಅವುಗಳನ್ನು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆಗೆ ತರಲಾಗುತ್ತದೆ. ಸೌಲಭ್ಯಗಳು ಮತ್ತು ಸೇವೆಗಳ ಗುಣಮಟ್ಟದ ಆಧಾರದ ಮೇಲೆ ಕೇಂದ್ರಗಳ ರೇಟಿಂಗ್‌ಗೆ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು" ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಹೊಂದಾಣಿಕೆಯ ಆಧಾರದ ಮೇಲೆ ಅಂತಹ ಅಭಿವೃದ್ಧಿಗೆ ಹಣಕಾಸು ಒದಗಿಸಲು ದೀರ್ಘಾವಧಿಯ ಬಡ್ಡಿ ರಹಿತ ಸಾಲಗಳನ್ನು ರಾಜ್ಯಗಳಿಗೆ ಒದಗಿಸಲಾಗುವುದು, ”ಎಂದು ಸಚಿವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com