ಗರ್ಭಕಂಠ ಕ್ಯಾನ್ಸರ್‌ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ; ಕೇಂದ್ರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಗರ್ಭಕಂಠ ಕ್ಯಾನ್ಸರ್‌ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ‌ಗರ್ಭಕಂಠ ಕ್ಯಾನ್ಸರ್‌ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಮಧ್ಯಂತರ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ಈ ಘೋಷಣೆಯನ್ನು ಮಾಡಿದರು. ನಮ್ಮ ಸರ್ಕಾರ ಗರ್ಭಕಂಠ ಕ್ಯಾನ್ಸರ್​ ತಡೆಯುವ ನಿಟ್ಟಿನಲ್ಲಿ ಲಸಿಕೆ ಕ್ರಮಕ್ಕೆ ಮುಂದಾಗಲಿದೆ. ತಾಯಿ ಮಕ್ಕಳ ಆರೈಕೆಗೆ ವಿವಿಧ ಯೋಜನೆಗಳನ್ನು ಒಂದು ಸಮಗ್ರ ಕಾರ್ಯಕ್ರಮದ ಅಡಿಯಲ್ಲಿ ತರಲಾಗುವುದು. ಸಕ್ಷಮ ಅಂಗನವಾಡಿ ಅಡಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸುವ ಮತ್ತು ಪೋಷಣ್​ 2.0 ಮೂಲಕ ಮಕ್ಕಳ ಆರೈಕೆ ಮತ್ತು ಅಭಿವೃದ್ಧಿ ಸೇರಿದಂತೆ ಸುಧಾರಿತ ಪೌಷ್ಟಿಕಾಂಶ ವಿತರಣೆಗಾಗಿ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅನೇಕ ಯುವ ಜನರು ವೈದ್ಯರಾಗುವ ಮಹಾತ್ವಕಾಂಕ್ಷೆಯನ್ನು ಹೊಂದಿದ್ದಾರೆ. ಅವರ ಈ ಕನಸಿಗಾಗಿ ನಮ್ಮ ಸರ್ಕಾರವು ಪ್ರಸ್ತುತ ಇರುವ ಆಸ್ಪತ್ರೆಗಳ ಮೂಲಸೌಕರ್ಯವನ್ನು ಬಳಕೆ ಮಾಡಿಕೊಂಡು ಮತ್ತಷ್ಟು ಹೆಚ್ಚಿನ ವೈದ್ಯಕೀಯ ಕಾಲೇಜು ನಿರ್ಮಾಣದ ಯೋಜನೆ ಹೊಂದಿದೆ. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಲಾಗುವುದು. ಇದು ಅದಕ್ಕೆ ಪೂರಕವಾಗುವ ಅಂಶಗಳ ಮೇಲ್ವಿಚಾರಣೆ ನಡೆಸಿ ಶಿಫಾರಸುಗಳನ್ನು ನೀಡಲಿದೆ ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರಕ್ಕೆ ಸಿಕ್ಕ ಪ್ರಮುಖ ಕೊಡುಗೆಗಳು ಇಂತಿವೆ...

  • ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ವಿಸ್ತರಣೆ
  • ಈಗಿರುವ ಆಸ್ಪತ್ರೆ ಮೂಲ ಸೌಕರ್ಯಗಳನ್ನು, ವಿಭಾಗಗಳನ್ನು ಬಳಸಿಕೊಂಡು ಹೆಚ್ಚಿನ ಹೊಸ ಮೆಡಿಕಲ್‌ ಕಾಲೇಜುಗಳ ಸ್ಥಾಪನೆ. ಇದಕ್ಕಾಗಿ ಹೊಸ ಸಮಿತಿ ರಚನೆ
  • ಸಕ್ಷಮ ಅಂಗನವಾಡಿ ಹಾಗೂ ಪೋಷಣ್‌ 2.0 ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನ. ಮಕ್ಕಳಲ್ಲಿ ಪೌಷ್ಟಿಕಾಂಶ ವೃದ್ಧಿ, ಮಕ್ಕಳ ಆರೈಕೆಗೆ ಹೆಚ್ಚಿನ ಒತ್ತು.
  • ಇಂದ್ರಧನುಷ್‌ ಯೋಜನೆ ಅಡಿಯಲ್ಲಿ ಪೌಷ್ಟಿಕಾಂಶ, ರೋಗ ನಿರೋಧಕ ವೃದ್ಧಿಗಾಗಿ ಯು-ವಿನ್‌ (U-Win) ವೇದಿಕೆ ರಚನೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com