ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.

ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸದನದಲ್ಲಿಯೇ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪಕ್ಷದ ಸಂಸದರು ನೀಡಿರುವ ಹೇಳಿಕೆಯನ್ನು ಖಂಡಿತಾ ಒಪ್ಪುವುದಿಲ್ಲ ಎಂದಿದ್ದಾರೆ.

ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಹೇಳಿದರು.

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.

ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ: ಇನ್ನು ಡಿಕೆ ಸುರೇಶ್ ಹೇಳಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಚಿವ ಪ್ರಲ್ಹಾದ್ ಜೋಶಿ, ದೇಶವಿಭಜನೆ ಬಗ್ಗೆ ಮಾತನಾಡಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್​​ನ ಪ್ರಯತ್ನ ಇನ್ನೂ ಮುಂದುವರೆದಿದೆ. ಈ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಹಾಗೂ ಕ್ಷಮೆ ಕೇಳಬೇಕು. ಇದು ಸಂವಿಧಾನಕ್ಕೆ ಮಾಡಿದ ಘೋರ ಅಪಮಾನ. ಅಷ್ಟೆ ಅಲ್ಲದೆ ತನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ ಕೆ ಸುರೇಶ್ ನಿನ್ನೆ ಏನು ಹೇಳಿದ್ದರು?: ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವು ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com