ಇಡಿಯಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಬಂಧನ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಸೊರೆನ್ ಪರ ಹಾಜರಿದ್ದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಪರಿಹಾರಕ್ಕಾಗಿ ಹೈಕೋರ್ಟ್ ನ್ನು ಸಂಪರ್ಕಿಸುವಂತೆ ಸೂಚಿಸಿತು. 

ತಮ್ಮ ಸನ್ನಿಹಿತ ಬಂಧನದ ಹಿನ್ನೆಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದ್ದ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು "ಸಂಯೋಜಿತ ಪಿತೂರಿ"ಯ ಭಾಗವಾಗಿ ಬಂಧಿಸಿದೆ ಎಂದು ಆರೋಪಿಸಿದ್ದಾರೆ. 

ತಮ್ಮ ಬಂಧನವನ್ನು ಅನಧಿಕೃತ, ಅನಿಯಂತ್ರಿತ ಮತ್ತು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಘೋಷಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಸೊರೆನ್ ಒತ್ತಾಯಿಸಿದ್ದಾರೆ. ಜನವರಿ 31 ರಂದು ಸೋರೆನ್ ಅವರನ್ನು ಬಂಧಿಸಲಾಯಿತು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ರಮವಾಗಿ ಭೂಮಿಯನ್ನು ಹೊಂದಿರುವ ಮತ್ತು "ಭೂ ಮಾಫಿಯಾ" ಜೊತೆಗಿನ ಸಂಬಂಧವನ್ನು ಸೊರೇನ್ ಮೇಲೆ ಆರೋಪಿಸಲಾಗಿದೆ. ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com