ಮುಂಬೈ ನಗರದ 6 ಕಡೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ: ಪೊಲೀಸರ ತೀವ್ರ ಕಟ್ಟೆಚ್ಚರ, ತಪಾಸಣೆ

ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.

ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಮಾಹಿತಿ ರವಾನೆಯಾಗಿದ್ದು, ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ. 

ಮುಂಬೈ ಪೊಲೀಸರ ಅಪರಾಧ ವಿಭಾಗ ಮತ್ತು ಮಹಾರಾಷ್ಟ್ರ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಬೆದರಿಕೆ ಸಂದೇಶದ ಬಗ್ಗೆ ಎಚ್ಚರಿಕೆ ನೀಡಿದ್ದು, ಕಳುಹಿಸಿದವರ ಪತ್ತೆಗೆ ತನಿಖೆ ನಡೆಯುತ್ತಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com