ಉತ್ತರ ಪ್ರದೇಶ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ನ್ಯಾಯಾಧೀಶೆಯ ಶವ ಪತ್ತೆ; ಕೊಲೆ ಪ್ರಕರಣ ದಾಖಲು

ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರೊಬ್ಬರ ಸಾವಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶ ಪೊಲೀಸರು
ಉತ್ತರ ಪ್ರದೇಶ ಪೊಲೀಸರು

ಬುದೌನ್: ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರೊಬ್ಬರ ಸಾವಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಿವಿಲ್ ನ್ಯಾಯಾಧೀಶೆ(ಕಿರಿಯ ವಿಭಾಗ) ಜ್ಯೋತ್ಸ್ನಾ ರೈ(27) ಅವರ ಮೃತದೇಹ ಅವರ ಕ್ವಾರ್ಟರ್ಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜ್ಯೋತ್ಸ್ನಾ ರೈ ಅವರ ಮೃತದೇಹ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸೂಸೈಡ್ ನೋಟ್ ಕೂಡ ಪತ್ತೆಯಾಗಿದೆ.

ಶನಿವಾರ ಸಂಜೆ ಬುದೌನ್ ಗೆ ಆಗಮಿಸಿದ ನ್ಯಾಯಾಧೀಶೆಯ ತಂದೆ, ಅಪರಿಚಿತ ವ್ಯಕ್ತಿಗಳು ತನ್ನ ಮಗಳನ್ನು ಕೊಂದು ಶವವನ್ನು ಆಕೆ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಶೋಕ್ ಕುಮಾರ್ ರೈ ಅವರು ತಮ್ಮ ಮಗಳು ತುಂಬಾ ಧೈರ್ಯಶಾಲಿ ಮತ್ತು ಜನರಿಗೆ ನ್ಯಾಯವನ್ನು ನೀಡುತ್ತಿದ್ದಳು. ಹೀಗಾಗಿ ಅವಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಶೋಕ್ ಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 302(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಎಸ್‌ಪಿ) ಅಲೋಕ್ ಪ್ರಿಯದರ್ಶಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com