ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ: ಅಖಿಲೇಶ್ ಯಾದವ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯಗಳ ನಡುವೆ INDI ಕೂಟದ ಮಿತ್ರಪಕ್ಷಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಿವೆ. ಇದೇ ವಿಚಾರವಾಗಿ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಎಂದು ಹೇಳುವ ಮೂಲಕ ಗೈರಿನ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೊ ನ್ಯಾಯ ಯಾತ್ರೆಯು ಪ್ರಸ್ತುತ ಜಾರ್ಖಂಡ್ ನಲ್ಲಿದ್ದು, ಮುಂಬೈನಲ್ಲಿ ಮುಕ್ತಾಯಗೊಳ್ಳುವ ಮೊದಲು ಮತ್ತಷ್ಟು ಪಶ್ಚಿಮ ರಾಷ್ಟ್ರಗಳಲ್ಲಿ ಸಾಗಲಿದೆ. ಈ ನಡುವೆ ಮೈತ್ರಿಕೂಟದ ಪ್ರಮುಖ ಪಕ್ಷಗಳ ವಾಪಸಾತಿಯ ನಂತರ INDI ಒಕ್ಕೂಟವನ್ನು ಮುಂದಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದರೆ, ನಿತೀಶ್ ಕುಮಾರ್ ನೇತೃತ್ವದ ಜನತಾ ದಳ-ಯುನೈಟೆಡ್ ಬಿಜೆಪಿ ನೇತೃತ್ವದ ಎನ್‌ಡಿಎಗೆ ಜಾರಿದೆ. ಅಂತೆಯೇ ಮೈತ್ರಿಕೂಟದ ಎರಡು ಪ್ರಮುಖ ಪಾಲುದಾರ ಪಕ್ಷಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ಹಳೆಯ ಪಕ್ಷ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಈಗಾಗಲೇ ತಳ್ಳಿಹಾಕಿದೆ.

ಏತನ್ಮಧ್ಯೆ ಭಾರತ ಜೋಡೋ ನ್ಯಾಯ್ ಯಾತ್ರೆಯು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದಾಗ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂದು ಅಖಿಲೇಶ್ ಯಾದವ್ ಅವರನ್ನು ಕೇಳಿದಾಗ, "ಹಲವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದಕ್ಕಾಗಿ ನಮಗೆ ಆಹ್ವಾನಗಳು ಬರುವುದಿಲ್ಲ, ನಾವು ಏಕೆ ಆಹ್ವಾನವನ್ನು ಕೇಳಬೇಕು?" ಎಂದು ಮಾರ್ಮಿಕವಾಗಿ ಹೇಳಿದರು. 

ಅಂದಹಾಗೆ ಯಾತ್ರೆ ಫೆಬ್ರವರಿ 14 ರಂದು ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ ಎಂದು ಹೇಳಲಾಗಿದೆ.

ಪ್ರಸ್ತುತ, ಭಾರತ್ ಜೊಡೋ ನ್ಯಾಯ್ ಯಾತ್ರೆ ಜಾರ್ಖಂಡ್‌ನಲ್ಲಿ ಸಾಗಿದೆ. ಜಾರ್ಖಂಡ್ ನಲ್ಲೂ ಸಾಕಷ್ಟು ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು, ಭೂ ಹಗರಣದಲ್ಲಿ ಮಾಜಿ ಸಿಎಂ ಹೇಮಂತ್ ಸೊರೆನ್ ಇಡಿ ವಶದಲ್ಲಿದ್ದರೆ, ಅವರ ಆಪ್ತ ಚಂಪೈ ಸೊರೆನ್ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.  ಹಲವು ಗೊಂದಲಗಳ ಬಳಿಕ ಏಳು ಬಾರಿ ಶಾಸಕ ಮತ್ತು ಹಿರಿಯ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೆನ್ ಅಂತಿಮವಾಗಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com