ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ 'ನಾಚಿಕೆಪಡುತ್ತಿದ್ದರು': ವಿಪಕ್ಷಗಳಿಗೆ ಪ್ರಧಾನಿ ಮೋದಿ

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ "ನಾಚಿಕೆಪಡುತ್ತಿದ್ದರು" ಎಂದು ನೇರವಾಗಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಅಸ್ಸಾಂನಲ್ಲಿ ಪ್ರಧಾನಿ ಮೋದಿ
ಅಸ್ಸಾಂನಲ್ಲಿ ಪ್ರಧಾನಿ ಮೋದಿ

ಗುವಾಹತಿ: ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ "ನಾಚಿಕೆಪಡುತ್ತಿದ್ದರು" ಎಂದು ನೇರವಾಗಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ₹11,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಗುವಾಹಟಿಯ ಖಾನಾಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಮತ್ತು ಕೇಂದ್ರದ  ಅನುದಾನಿತ ಯೋಜನೆ ಸೇರಿ ಹಲವು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, 'ಸ್ವಾತಂತ್ರ್ಯಾ ನಂತರ ಅಧಿಕಾರದಲ್ಲಿರುವವರು ಧಾರ್ಮಿಕ ಸ್ಥಳಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮದೇ ಸಂಸ್ಕೃತಿಯ ಬಗ್ಗೆ ನಾಚಿಕೆಪಡುವ ಪ್ರವೃತ್ತಿಯನ್ನು ಹೊಂದಿದ್ದರು. ಆದರೆ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಸರ್ಕಾರ ಕೈಗೊಂಡ ಅಭಿವೃದ್ಧಿ ಯೋಜನೆಗಳು ಈಶಾನ್ಯ ಮಾತ್ರವಲ್ಲದೆ ದಕ್ಷಿಣ ಏಷ್ಯಾದ ಇತರ ಭಾಗಗಳಲ್ಲಿ ಸಂಪರ್ಕವನ್ನು ಬಲಪಡಿಸುತ್ತದೆ. ಕಳೆದ 10 ವರ್ಷಗಳಲ್ಲಿ ಅಸ್ಸಾಂನಲ್ಲಿ ಶಾಂತಿ ನೆಲೆಸಿದೆ ಮತ್ತು 7,000 ಕ್ಕೂ ಹೆಚ್ಚು ಜನರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದಾರೆ. ಕಳೆದ ದಶಕದಲ್ಲಿ ಈ ಪ್ರದೇಶಕ್ಕೆ ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಕಾಮಾಖ್ಯ ದೇವಸ್ಥಾನದ ಕಾರಿಡಾರ್, ಗುವಾಹಟಿಯ ಹೊಸ ವಿಮಾನ ನಿಲ್ದಾಣದಿಂದ ಆರು ಪಥದ ರಸ್ತೆ, ನೆಹರು ಸ್ಟೇಡಿಯಂ ಅನ್ನು ಫಿಫಾ ಗುಣಮಟ್ಟಕ್ಕೆ ಏರಿಸುವ ಯೋಜನೆ ಮತ್ತು ಚಂದ್ರಾಪುರದಲ್ಲಿ ಹೊಸ ಕ್ರೀಡಾ ಸಂಕೀರ್ಣ ನಿರ್ಮಾಣ ಯೋಜನೆ ಸೇರಿ ಇನ್ನೂ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

ಶನಿವಾರ ಸಂಜೆ ಅಸ್ಸಾಂಗೆ ಆಗಮಿಸಿದ ಮೋದಿ, ರಾತ್ರಿ ನಗರದ ಕೊಯಿನಾಧಾರ ರಾಜ್ಯ ಅತಿಥಿ ಗೃಹದಲ್ಲಿ ತಂಗಿದ್ದರು.ರಾತ್ರಿ ಬಿಜೆಪಿಯ ರಾಜ್ಯ ಕೋರ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿ ಮಾಡಿ ಪಕ್ಷದ ವ್ಯವಹಾರಗಳ ಕುರಿತು ಚರ್ಚಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com