'ಬೇಕಾಬಿಟ್ಟಿ ಹಣ ಖರ್ಚು ಮಾಡಿ, ಬಜೆಟ್ ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರವನ್ನು ದೂಷಿಸಬೇಡಿ': ನಿರ್ಮಲಾ ಸೀತಾರಾಮನ್

ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ಯಾವುದೇ ರೀತಿಯ ತಾರತಮ್ಯ ಸಾಧ್ಯವಿಲ್ಲ.. ಆ ರೀತಿಯ ಆರೋಪಗಳು ಕೇವಲ ರಾಜಕೀಯ ಪ್ರೇರಿತ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ಯಾವುದೇ ರೀತಿಯ ತಾರತಮ್ಯ ಸಾಧ್ಯವಿಲ್ಲ.. ಆ ರೀತಿಯ ಆರೋಪಗಳು ಕೇವಲ ರಾಜಕೀಯ ಪ್ರೇರಿತ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಕರ್ನಾಟಕ ಸರ್ಕಾರದ ಹೇಳಿಕೆಯ ಕುರಿತು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, “ವ್ಯವಸ್ಥೆ ಉತ್ತಮವಾಗಿರುವುದರಿಂದ” ಮತ್ತು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿರುವುದರಿಂದ ಅಂತಹ ಪರಿಸ್ಥಿತಿ ಬರಲು ಸಾಧ್ಯವಿಲ್ಲ. ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರವೇ ರಾಜ್ಯಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಹಣಕಾಸು ಆಯೋಗದ (Finance Commission) ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು (GST) ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ. ಆಯೋಗದ ಶಿಫಾರಸು ಉಲ್ಲಂಘಿಸಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ. ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ.

ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಮುಂದುವರಿದು ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು.

ಅಂತೆಯೇ ಯಾವುದೇ ಕೇಂದ್ರ ಹಣಕಾಸು ಸಚಿವರು ಹಣಕಾಸು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನಗೆ ಈ ರಾಜ್ಯ ಇಷ್ಟವಿಲ್ಲ. ತೆರಿಗೆ ಮರುಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಹಣಕಾಸು ಸಚಿವರಿಗೆ ಅಧಿಕಾರ ಇಲ್ಲ. ಸಚಿವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವ್ಯವಸ್ಥೆ ಉತ್ತಮವಾಗಿದೆ. ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ. ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com