ಹೇಮಂತ್ ಸೋರೆನ್
ಹೇಮಂತ್ ಸೋರೆನ್

ಸೋರೆನ್ ರಿಂದ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲು: ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ.

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ. ಈಗ ಇಡಿ ಅಧಿಕಾರಿಗಳು ತಮ್ಮ ವಿರುದ್ಧ ದಾಖಲಿಸಲಾದ ಎಫ್ಐಆರ್ ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಬುಧವಾರ, ಹೇಮಂತ್ ಸೋರೆನ್ ಅವರು ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಅಧಿಕಾರಿಗಳು ತಮಗೆ ಮತ್ತು ತಮ್ಮ ಇಡೀ ಸಮುದಾಯಕ್ಕೆ 'ಕಿರುಕುಳ' ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೇಮಂತ್ ಸೋರೆನ್ ಅವರನ್ನು ಬುಧವಾರ ಸಂಜೆ 7 ಗಂಟೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿದೆ. ಅವರ ಬಂಧನದ ನಂತರ, ಜೆಎಂಎಂ ಹಿರಿಯ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

"ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಮಾಜಿ ಸಿಎಂ ಹೇಮಂತ್ ಸೋರೆನ್ ತನ್ನ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಇಡಿ ಜಾರ್ಖಂಡ್ ಹೈಕೋರ್ಟ್‌ಗೆ ತೆ ಫೆಬ್ರವರಿ 3 ರಂದು ಅರ್ಜಿ ಸಲ್ಲಿಸಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯ ಎಸ್ಸಿ ಎಸ್ಟಿ ಪೊಲೀಸ್ ಠಾಣೆಯಲ್ಲಿ ಇಡಿ ವಿರುದ್ಧ ದೂರು ದಾಖಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com