ಜಾರ್ಖಂಡ್‌ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್

ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.
ಹೇಮಂತ್ ಸೊರೇನ್-ಚಂಪೈ ಸೊರೇನ್
ಹೇಮಂತ್ ಸೊರೇನ್-ಚಂಪೈ ಸೊರೇನ್

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಕೂಟ 47 ಶಾಸಕರು ಕೈ ಎತ್ತುವ ಮೂಲಕ ಚಂಪೈ ಸರ್ಕಾರಕ್ಕೆ ಬಂಬಲ ನೀಡಿದರು. 29 ಶಾಸಕರು ವಿಶ್ವಾಸಮತದ ವಿರುದ್ಧವಾಗಿ ಕೈ ಎತ್ತಿದರು.
 
ಇದಕ್ಕು ಮುನ್ನ ವಿಧಾನಸಭೆಯಲ್ಲಿ ಮಾತನಾಡಿದ ಬಂಧನಕ್ಕೊಳಗಾಗಿರುವ ಮಾಜಿ ಸಿಎಂ ಹೇಮಂತ್ ಸೋರೆನ್ ತಮ್ಮ ಬಂಧನಕ್ಕೆ ಬಿಜೆಪಿ ಕಾರಣ ಎಂದು ದೂಷಿಸಿದರು. 

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಈಗ ಇಡಿ ಕಸ್ಟಡಿಯಲ್ಲಿದ್ದಾರೆ. ವಿಶ್ವಾಸ ಮತಕ್ಕಾಗಿ ವಿಧಾನಸಭೆಯಲ್ಲಿ ಹಾಜರಾಗಲು ಇಡಿ ಮಾಜಿ ಸಿಎಂ ಅವಕಾಶ ನೀಡಿದೆ.

ಕಳೆದ ಸಂಜೆ, ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೈದರಾಬಾದ್ ನಿಂದ ಆಗಮಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com