ದೆಹಲಿಯಲ್ಲಿ ಎಲ್‌ಇಟಿ ಉಗ್ರ, ನಿವೃತ್ತ ಸೇನಾ ಸಿಬ್ಬಂದಿಯ ಬಂಧನ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್‌ಇಟಿ ಉಗ್ರನ ಬಂಧನ
ಎಲ್‌ಇಟಿ ಉಗ್ರನ ಬಂಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಉಗ್ರ ನಿವೃತ್ತ ಸೇನಾ ಸಿಬ್ಬಂದಿಯಾಗಿದ್ದು. ಗಡಿ ನಿಯಂತ್ರಣ ರೇಖೆಯಿಂದ(ಎಲ್‌ಒಸಿ) ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅವರು ಹೇಳಿದ್ದಾರೆ.

ಆರೋಪಿಯನ್ನು ಕುಪ್ವಾರಾ ಜಿಲ್ಲೆಯ ರಿಯಾಜ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದ್ದು, ಆತನನ್ನು ಭಾನುವಾರ ದೆಹಲಿ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ, ಎಲ್‌ಒಸಿಯಲ್ಲಿ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖುರ್ಷೀದ್ ಅಹ್ಮದ್ ರಾಥರ್ ಮತ್ತು ಗುಲಾಮ್ ಸರ್ವರ್ ಜೊತೆಗೆ ಸಂಚು ರೂಪಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com