ನಾಯಿಯೂ ತಿನ್ನದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್! ಬಿಜೆಪಿ ನಾಯಕರ ವಾಗ್ದಾಳಿ

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. 
ರಾಹುಲ್ ಗಾಂಧಿ, ಅಸ್ಸಾಂ ಸಿಎಂ ಶರ್ಮಾ
ರಾಹುಲ್ ಗಾಂಧಿ, ಅಸ್ಸಾಂ ಸಿಎಂ ಶರ್ಮಾ

ನವದೆಹಲಿ: ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ ನ್ನು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. 

ವೈರಲ್ ವಿಡಿಯೋದಲ್ಲಿ ಯಾತ್ರೆಯಲ್ಲಿ ಸಾಗುತ್ತಿರುವ ರಾಹುಲ್ ಗಾಂಧಿ ನಾಯಿಮರಿಯೊಂದನ್ನು ಮುದ್ದಿಸುತ್ತಿರುವುದು ಕಂಡುಬಂದಿದೆ. ನಂತರ ಪಕ್ಷದ ಕಾರ್ಯಕರ್ತರೊಬ್ಬರಿಂದ ಪಡೆದ ಬಿಸ್ಕತ್ ನ್ನು ನಾಯಿಗೆ ರಾಹುಲ್ ಗಾಂಧಿ ಹಾಕಿದ್ದಾರೆ. ಆದರೆ, ಅದು ತಿನ್ನಲು ನಿರಾಕರಿಸಿದಾಗ ಪಕ್ಷದ ಕಾರ್ಯಕರ್ತರೊಬ್ಬರಿಗೆ ಬಿಸ್ಕತ್ ನೀಡಿದ್ದಾರೆ. ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕ ತನ್ನ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಪಕ್ಷದ ಬೂತ್ ಏಜೆಂಟರನ್ನು ನಾಯಿಗೆ ಹೋಲಿಸಿದ್ದರು ಈಗ ರಾಹುಲ್ ಗಾಂಧಿ ಭೇಟಿ ವೇಳೆ ನಾಯಿಗೆ ಬಿಸ್ಕತ್ ತಿನ್ನಿಸುತ್ತಿದ್ದು, ನಾಯಿ ತಿನ್ನದೇ ಇದ್ದಾಗ ಅದೇ ಬಿಸ್ಕೆಟ್ ಅನ್ನು ತಮ್ಮ ಕಾರ್ಯಕರ್ತನಿಗೆ ನೀಡಿದ್ದಾರೆ.ಒಂದು ಪಕ್ಷದ ಅಧ್ಯಕ್ಷ ಮತ್ತು ಪಟ್ಟದ ರಾಜಕುಮಾರ ತನ್ನ ಪಕ್ಷದ ಕಾರ್ಯಕರ್ತರನ್ನು ನಾಯಿಗಳಂತೆ ನಡೆಸಿಕೊಂಡರೆ, ಅಂತಹ ಪಕ್ಷವು ಕಣ್ಮರೆಯಾಗುವುದು ಸಹಜ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತನಿಗೆ ನಾಯಿ ತಿರಸ್ಕರಿಸಿದ ಬಿಸ್ಕತ್ತನ್ನು ನೀಡಿದ್ದಾರೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಮತದಾರರಿಗೆ ನೀಡುವ ಗೌರವವೇ ಎಂದು ಬಿಜೆಪಿ ನಾಯಕಿ ಪಲ್ಲವಿ ಟೀಕಿಸಿದ್ದಾರೆ. ಪಲ್ಲವಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಹಿಮಂತ ಬಿಸ್ವಾ ಶರ್ಮಾ, ರಾಹುಲ್ ಗಾಂಧಿ ಮಾತ್ರವಲ್ಲ, ಅವರ ಇಡೀ ಕುಟುಂಬವೂ ನನಗೆ ಆ ಬಿಸ್ಕತ್ತನ್ನು ತಿನ್ನಿಸಲು ಸಾಧ್ಯವಾಗಲಿಲ್ಲ. ನಾನು ಹೆಮ್ಮೆಯ ಅಸ್ಸಾಮಿ ಮತ್ತು ಭಾರತೀಯ. ಅದನ್ನು ತಿನ್ನಲು ನಿರಾಕರಿಸಿ,ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ.

ಅಧಿಕೃತ ಭಾರತ್ ಜೋಡೋ ಯಾತ್ರೆಯ ಹ್ಯಾಂಡಲ್ ನಲ್ಲಿ ರಾಹುಲ್ ಗಾಂಧಿ ನಾಯಿಮರಿಯನ್ನು ಮುದ್ದಿಸುತ್ತಿರುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಆದರೆ ಆ ಕ್ಲಿಪ್ ನಲ್ಲಿ ಬಿಸ್ಕೆಟ್ ಎಪಿಸೋಡ್ ತೋರಿಸುವುದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com