ಕರ್ನಾಟಕ ಕಾಂಗ್ರೆಸ್ ಸರ್ಕಾರ 'ಸುಳ್ಳು ನಿರೂಪಣೆ'ಯನ್ನು ಬಿಂಬಿಸುತ್ತಿದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು 'ಪ್ರತ್ಯೇಕತಾವಾದಿ' ಮನಸ್ಥಿತಿಯನ್ನು ಹೊಂದಿದೆ. ಅನುದಾನ ಹಂಚಿಕೆಯಲ್ಲಿ ರಾಜ್ಯದ ವಿರುದ್ಧ ಕೇಂದ್ರದ ತಾರತಮ್ಯದ ಬಗ್ಗೆ 'ಸುಳ್ಳು ನಿರೂಪಣೆ' ಯನ್ನು ಹರಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು

ನವದೆಹಲಿ: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು 'ಪ್ರತ್ಯೇಕತಾವಾದಿ' ಮನಸ್ಥಿತಿಯನ್ನು ಹೊಂದಿದೆ. ಅನುದಾನ ಹಂಚಿಕೆಯಲ್ಲಿ ರಾಜ್ಯದ ವಿರುದ್ಧ ಕೇಂದ್ರದ ತಾರತಮ್ಯದ ಬಗ್ಗೆ 'ಸುಳ್ಳು ನಿರೂಪಣೆ' ಯನ್ನು ಹರಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಬರ ಪರಿಹಾರ ನೀಡುವಲ್ಲಿಯೂ ವಿಳಂಬವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕ ಸಿಎಂ ಸಿದ್ದರಾಮಯ್ಯ 13 ಬಾರಿ ರಾಜ್ಯ ಬಜೆಟ್ ಮಂಡಿಸಿರುವುದರಿಂದ ಸಾರ್ವಜನಿಕ ಹಣಕಾಸು ಹೇಗೆ ವೆಚ್ಚವಾಗುತ್ತದೆ ಎಂದು ಚೆನ್ನಾಗಿ ತಿಳಿದಿದೆ ಎಂದು ಭಾವಿಸಿದ್ದೆ, ಆದರೆ ಅವರು ಅದಕ್ಕೆ ವಿಷಪೂರಿತ ನಿರೂಪಣೆಯನ್ನು ಸೇರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣಕಾಸು ಸಚಿವರು ಹೇಳಿದ್ದೇನು?
ಕಾಂಗ್ರೆಸ್ ಗೆ ತನ್ನ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ. ಹೀಗಾಗಿ ಅದು ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮತ್ತು ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ವಾದಗಳನ್ನು ಮಂಡಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಐದು ಖಾತ್ರಿಗಳು ಸರ್ಕಾರಕ್ಕೆ ಭಾರಿ ಆರ್ಥಿಕ ಹೊರೆಯಾಗಿ ಪರಿಣಮಿಸಿವೆ ಎಂದು ಇದೇ ಜನವರಿ 9ರಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದರು. ಗೆದ್ದಿದ್ದೇವೆ ಆದರೆ ಭರವಸೆ ಈಡೇರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಅರಿವಾಗುತ್ತಿದೆ. ಕೇಂದ್ರವನ್ನು ದೂಷಿಸುವುದು ಕರ್ನಾಟಕದ ಜನತೆಗೆ ತೋರಿಸುವುದು. ಪ್ರಚಾರದ ಸಮಯದಲ್ಲಿ, ನಮ್ಮಲ್ಲಿ ಹಲವರು ವಾರ್ಷಿಕವಾಗಿ ಸುಮಾರು 60,000 ಕೋಟಿಗಳಷ್ಟು ವೆಚ್ಚವಾಗುತ್ತದೆ ಎಂದು ಹೇಳಿದ್ದರು.

ನಿಮ್ಮ ತೆರಿಗೆ ಹಣ ನಮಗೆ ಬೇಡ, ಪ್ರತ್ಯೇಕ ರಾಜ್ಯ ಕೊಡಿ ಎಂದು ಡಿ.ಕೆ ಶಿವಕುಮಾರ್ ಸಹೋದರ ಸಂಸದ ಡಿಕೆ ಸುರೇಶ್ ಹೇಳಿಕೆಯನ್ನು ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ವಿರೋಧ ಪಕ್ಷವನ್ನು ಕೆಣಕಿದರು. ನಿರ್ಮಲಾ ಸೀತಾರಾಮನ್ ಅವರ ಜೊತೆ ಕರ್ನಾಟಕದ ಸಂಸದ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವಾಸ್ತವವಾಗಿ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ಅನುಭವಿಸಿದ 1.87 ಲಕ್ಷ ಕೋಟಿ ರೂಪಾಯಿ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ದೆಹಲಿಯ ಜಂತ್ ಮಂತರ್ ನಲ್ಲಿ ಕರ್ನಾಟಕ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಎಲ್ಲ ಸಚಿವರು ಭಾಗಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com