ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಗುರುವಾರ ಪ್ರಶ್ನಿಸಿದ್ದಾರೆ.
ದೇವೇಗೌಡ
ದೇವೇಗೌಡ

ನವದೆಹಲಿ: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಗುರುವಾರ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿ ಮೊದಲು ಮಾತನಾಡಿದ ಪ್ರಧಾನಿ ಮೋದಿಯವರು, ಡಾ.ಮನಮೋಹನ್ ಸಿಂಗ್ ಅವರನ್ನು ಕೊಂಡಾಡಿದರು.

ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಮನಮೋಹನ್ ಸಿಂಗ್ ಒಳ್ಳೆಯ ಕೆಲಸ ಮಾಡಿದ್ದಾರೆ. ಪ್ರಧಾನಿ ಅವರ ಬಗ್ಗೆ ಆಡಿದ ಮಾತುಗಳಿಗಾಗಿ ನಾನು ಧನ್ಯವಾದ ಹೇಳುತ್ತೇನೆ. ಹೀಗೆಯೇ ಇರಬೇಕು. ಒಳ್ಳೆಯ ಕೆಲಸವನ್ನು ಮೆಚ್ಚಿ, ಕೆಟ್ಟದ್ದನ್ನು ಟೀಕಿಸಬೇಕು ಎಂದು ಹೇಳಿದರು.

ಇದೇ ವೇಳೆ ರಾಜ್ಯಸಭೆಯಲ್ಲಿ ದೇಶಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಹೆಚ್ಚಿನ ಚರ್ಚೆಗಳನ್ನು ನಡೆಸುವಂತೆ ಖರ್ಗೆ ಸದನವನ್ನು ಒತ್ತಾಯಿಸಿದರು.

ಬಳಿಕ ದೇವೇಗೌಡ ಅವರ ಕುರಿತು ಮಾತನಾಡಿದ ಅವರು, ನಿಮಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ, ನನ್ನ ಮೈತ್ರಿಗೆ ಯಾರು ಬೆಂಬಲ ನೀಡುತ್ತಾರೆ?” ಎಂದು ದೇವೇಗೌಡ ಅವರು ನನ್ನನ್ನು ಪ್ರಶ್ನಿಸಿದ್ದರು. ಮೋದಿ ಮತ್ತು ದೇವೇಗೌಡರ ಪ್ರೇಮ ಸ್ವಲ್ಪ ತಡವಾಗಿದೆ ಮೂಡಿದೆ” ಎಂದು ಹೇಳಿ ದೇವೇಗೌಡ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಮಾತನಾಡಿದರು.

ಈ ವೇಳೆ ಉತ್ತರಿಸಿ ಮಾತನಾಡಿದ ದೇವೇಗೌಡ ಅವರು, ಖರ್ಗೆ ಪ್ರಾಮಾಣಿಕ ವ್ಯಕ್ತಿ, ಮನಮೋಹನ್ ಸಿಂಗ್ ಅಪ್ಪಟ ಪ್ರಾಮಾಣಿಕ ವ್ಯಕ್ತಿ, ಆದರೆ, ಕಾಂಗ್ರೆಸ್ ತನ್ನ ಪಕ್ಷವನ್ನು ತಾನೇ ದುರ್ಬಲಗೊಳಿಸುತ್ತಿದೆ. ಖರ್ಗೆ ಅವರು ಉನ್ನತ ಸ್ಥಾನಕ್ಕೆ ಬಂದರೆ ಅವರು ಸಹಿಸಿಕೊಳ್ಳುತ್ತಾರೆಯೇ? ಖರ್ಗೆ ಸಿಎಂ ಆಗಬೇಕು ಅಂತ ಆಸೆ ಇತ್ತು, ನನ್ನ ಸ್ವಂತ ಮಗನಲ್ಲ. ಖರ್ಗೆ ಅವರು ಉನ್ನತ ಸ್ಥಾನಕ್ಕೆ ಬಂದರೆ ಕಾಂಗ್ರೆಸ್ ನವರು ಸಹಿಸಿಕೊಳ್ಳುತ್ತಾರೆಯೇ? ಎಂದು ಖರ್ಗೆಯವರಿಗೆ ಪ್ರಶ್ನಿಸಿದರು.

1991 ರಲ್ಲಿ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಏನು ಮಾಡಿದ್ದಾರೆ ಎಂಬುದರ ಬಗ್ಗೆ ನಾನು ಸಾಕಷ್ಟು ಮಾತನಾಡಬಲ್ಲೆ ಎಂದೂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com