ಸೋನಿಯಾ, ರಾಹುಲ್ ಗಾಂಧಿ ತಮ್ಮ ಜಾತಿ, ಧರ್ಮ ಯಾವುದು ಅಂತ ಹೇಳಬಹುದೇ?: ಬಿಜೆಪಿ ಸಂಸದ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮ ಯಾವುದು ಎಂದು ಹೇಳಬಹುದೇ? ಎಂದು ಭಾರತೀಯ ಜನತಾ ಪಕ್ಷದ ಸಂಸದ ಹರನಾಥ್ ಯಾದವ್ ಅವರು ಶುಕ್ರವಾರ...
ಕರ್ನಾಟಕದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಕರ್ನಾಟಕದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
Updated on

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮ ಯಾವುದು ಎಂದು ಹೇಳಬಹುದೇ? ಎಂದು ಭಾರತೀಯ ಜನತಾ ಪಕ್ಷದ ಸಂಸದ ಹರನಾಥ್ ಯಾದವ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 'ಇತರ ಹಿಂದುಳಿದ ಜಾತಿ(ಒಬಿಸಿ)'ಗೆ ಸೇರಿದವರಲ್ಲ ಎಂದು ಟೀಕಿಸಿದ್ದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯಾದವ್, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದಿಂದ ಬಂದಿರುವುದನ್ನು ಕಾಂಗ್ರೆಸ್ ಸಹಿಸುತ್ತಿಲ್ಲ ಎಂದು ಎಎನ್‌ಐಗೆ ತಿಳಿಸಿದ್ದಾರೆ.

"ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮವನ್ನು ನಿರ್ದಿಷ್ಟವಾಗಿ ಹೇಳಬಹುದೇ? ತನ್ನ ಜಾತಿ, ಧರ್ಮದ ಬಗ್ಗೆ ಗೊತ್ತಿಲ್ಲದ ವ್ಯಕ್ತಿಗೆ ಇಂತಹ ಮಾತುಗಳನ್ನು ಹೇಳುವ ಹಕ್ಕು ಇಲ್ಲ ಎಂದು ಬಿಜೆಪಿ ಸಂಸದ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನ ಡಿಎನ್ಎ ಹಿಂದುಳಿದ ವರ್ಗಗಳ ವಿರುದ್ಧವಾಗಿದೆ. ಪ್ರಧಾನಿ ಮೋದಿ ಹಿಂದುಳಿದ ವರ್ಗದಿಂದ ಬಂದಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ದೇಶದ ಜನರು ಇನ್ನು ಮುಂದೆ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರೇ ಕಾಂಗ್ರೆಸ್ ಅನ್ನು ಅಳಿಸಿ ಹಾಕುತ್ತಾರೆ ಎಂದು ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com