ಆಂಧ್ರ ಪ್ರದೇಶದ ನೆಲ್ಲೂರು ಬಳಿ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ, 15 ಮಂದಿಗೆ ಗಾಯ

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೀಡಾಗಿರುವ ವಾಹನ.
ಅಪಘಾತಕ್ಕೀಡಾಗಿರುವ ವಾಹನ.

ನೆಲ್ಲೂರು (ಆಂಧ್ರ ಪ್ರದೇಶ): ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿಗಳ ಪ್ರಕಾರ ಖಾಸಗಿ ಬಸ್ ಚೆನ್ನೈನಿಂದ ಹೈದರಾಬಾದ್​ಗೆ ಬರುತ್ತಿತ್ತು. ನೆಲ್ಲೂರು ಬಳಿ ಮೊದಲು ಟ್ರಕ್​ವೊಂದು ನಿಂತಿದ್ದ ರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬಸ್​ ಮಧ್ಯೆ ಅಪಘಾತ ಸಂಭವಿಸಿತ್ತು. ಡಿಕ್ಕಿ ರಭಸಕ್ಕೆ ಬಸ್​ನಲ್ಲಿದ್ದ ಚಾಲಕ ಸಮೇತ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ  ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.

ಇನ್ನು ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಿದರು.

ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಮೃತರ ಪತ್ತೆ ಕಾರ್ಯ ಬಳಿಕ ಆಯಾ ಕುಟುಂಬಸ್ಥರಿಗೆ ಮಾಹಿತಿ ರವಾನಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಅಪಘಾತದ ಸ್ಥಳದಲ್ಲಿ ಅಪಘಾತಕ್ಕೀಡಾದ ವಾಹನಗಳನ್ನು ಕ್ರೇನ್​ ಮೂಲಕ ತೆರವು ಮಾಡುವ ಕಾರ್ಯಾಚರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಮೂಲಕ ಸಾರಿಗೆ ಸಂಚಾರ ಸುಗಮಗೊಳಿಸುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com