ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರದಿಂದ 'ಪ್ರಶಸ್ತಿ'!

ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಂಟೆಂಟ್ ಕ್ರಿಯೇಟರ್ಸ್‌ಗೆ 'ಪ್ರಶಸ್ತಿ' ನೀಡಲು ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಂಟೆಂಟ್ ಕ್ರಿಯೇಟರ್ಸ್‌ಗೆ 'ಪ್ರಶಸ್ತಿ' ನೀಡಲು ಮುಂದಾಗಿದೆ.

ಹೊಸ ಯುಗದ ಪ್ರಭಾವಿಗಳು ಮತ್ತು ಕಂಟೆಂಟ್ ಕ್ರಿಯೇಟರ್ಸ್ ಗಳನ್ನು ಗುರುತಿಸಲು ಕೇಂದ್ರ ಸರ್ಕಾರವು ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ ನೀಡಲು ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೊದಲ-ರೀತಿಯ ಪ್ರಶಸ್ತಿಗಳನ್ನು "Gen Z" ಅನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಸುಮಾರು 20 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು. ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ದೇಶದ ಮೃದು ಶಕ್ತಿ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಇತರ ವಿಭಾಗಗಳು "ಗ್ರೀನ್ ಚಾಂಪಿಯನ್ಸ್", "ಸ್ವಚ್ಛತಾ ರಾಯಭಾರಿಗಳು", "ಕೃಷಿ ಸೃಷ್ಟಿಕರ್ತರು" ಮತ್ತು "ಟೆಕ್ ಕ್ರಿಯೇಟರ್ಸ್" ವಿಭಾಗಗಳಲ್ಲೂ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವಿಧ ಭಾಷೆ ಮತ್ತು ವಿಭಾಗಗಳ ಚಲನಚಿತ್ರಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಮಾದರಿಯಲ್ಲಿ ಪ್ರಶಸ್ತಿಗಳು ಇರುತ್ತವೆ ಎಂದು ಹೇಳಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com