ಲೋಕಸಭಾ ಚುನಾವಣೆಗೂ ಮುನ್ನಾ ಸಂಸತ್ತಿನ ಅಂತಿಮ ಅಧಿವೇಶನ ಮುಕ್ತಾಯ, ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ

ಲೋಕಸಭಾ ಚುನಾವಣೆಗೂ ಮುನ್ನ ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯದೊಂದಿಗೆ ಲೋಕಸಭೆ ಮತ್ತು ರಾಜ್ಯಸಭೆಯನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕಳೆದ ಐದು ವರ್ಷಗಳಲ್ಲಿ 17 ಲೋಕಸಭೆಯು 222 ಮಸೂದೆಗಳನ್ನು ಅಂಗೀಕರಿಸಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ಲೋಕಸಭೆ
ಲೋಕಸಭೆ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯದೊಂದಿಗೆ ಲೋಕಸಭೆ ಮತ್ತು ರಾಜ್ಯಸಭೆಯನ್ನು ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕಳೆದ ಐದು ವರ್ಷಗಳಲ್ಲಿ 17 ಲೋಕಸಭೆಯು 222 ಮಸೂದೆಗಳನ್ನು ಅಂಗೀಕರಿಸಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಅಧಿವೇಶನದ ಕೊನೆಯ ದಿನದಂದು ಸದನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಚರ್ಚಿಸಿ ನಿರ್ಣಯವನ್ನು ಅಂಗೀಕರಿಸಿತು. ಕೊನೆಯ ಭಾಷಣದಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಆಡಳಿತ  ಮತ್ತು ವಿರೋಧ ಪಕ್ಷದ ಸದಸ್ಯರನ್ನು ಸಮಾನವಾಗಿ ಪರಿಗಣಿಸಿದ್ದು, ಸದನದ ಘನತೆ ಕಾಪಾಡಲು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದರು. ನಂತರ ಬಿರ್ಲಾ ಅವರು ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನಾ ಕೊನೆಯ  ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಯಿತು. ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್, ಕಿರಿದು ಆದರೆ, ಮಹತ್ವದ ಅಧಿವೇಶನದಲ್ಲಿ ಸದನವು ಒಂಬತ್ತು ದಿನಗಳ ಕಾಲ ಸಾರ್ವಜನಿಕ ಪ್ರಾಮುಖ್ಯತೆಯ 116 ವಿಷಯಗಳೊಂದಿಗೆ ವ್ಯವಹರಿಸಿತು ಮತ್ತು ಸಂಸದರ 90 ಚುಕ್ಕೆ ಹಾಕಿದ ಮತ್ತು 960 ಚುಕ್ಕೆ ಹಾಕದ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಒಟ್ಟಾರೆ ಶೇ. 137 ರಷ್ಟು ಫಲಪ್ರದವಾಗಿದೆ ಎಂದು ಹೇಳಿದರು.

ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರಗತಿಯನ್ನು ಸಾಧಿಸುತ್ತಿದ್ದು, ಅಪಾರ ಸಾಧ್ಯತೆಗಳ ಯುಗದಲ್ಲಿದೆ ಎಂದು ತಿಳಿಸಿದ ಸಭಾಪತಿ, ನಿರಂತರ ಏರಿಕೆಗೆ ಕೊಡುಗೆ ನೀಡಲು ಸದಸ್ಯರನ್ನು ಕೋರಿದರು. ರಾಜ್ಯಸಭೆಯ 263 ನೇ ಅಧಿವೇಶನವನ್ನು ಮುಕ್ತಾಯಗೊಳಿಸಿದ್ದೇವೆ.  ಸಾರ್ವತ್ರಿಕ ಚುನಾವಣೆಗೆ ಹೋಗುವ ಮೊದಲು ಇದು ಕೊನೆಯ ಅಧಿವೇಶನವಾಗಿದೆ. ಇದು ಪ್ರಜಾಪ್ರಭುತ್ವದ ತಾಯಿಯಲ್ಲಿ ಪ್ರಜಾಪ್ರಭುತ್ವದ ನಿಜವಾದ ಹಬ್ಬ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com