ಪ್ರಧಾನಿ ಮೋದಿ ಹೊಗಳಿದ್ದ ಆಚಾರ್ಯ ಪ್ರಮೋದ್ ಕೃಷ್ಣಂ ಕಾಂಗ್ರೆಸ್ ನಿಂದ ಉಚ್ಚಾಟನೆ

ರಾಮಮಂದಿರ ಉದ್ಘಾಟನೆ ವಿಚಾರವಾಗಿ ತಮ್ಮದೇ ಪಕ್ಷವನ್ನು ಟೀಕಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದ ಉತ್ತರ ಪ್ರದೇಶ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಆಚಾರ್ಯ ಪ್ರಮೋದ್ ಕೃಷ್ಣಂ
ಆಚಾರ್ಯ ಪ್ರಮೋದ್ ಕೃಷ್ಣಂ

ನವದೆಹಲಿ: ರಾಮಮಂದಿರ ಉದ್ಘಾಟನೆ ವಿಚಾರವಾಗಿ ತಮ್ಮದೇ ಪಕ್ಷವನ್ನು ಟೀಕಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದ ಉತ್ತರ ಪ್ರದೇಶ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಆರೋಪದ ಮೇರೆಗೆ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಕಾಂಗ್ರೆಸ್ ಪಕ್ಷದಿಂದ ಶನಿವಾರ ಉಚ್ಛಾಟಿಸಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲಕ್ನೋದಿಂದ ಸ್ಪರ್ಧಿಸಿ ಸೋತಿದ್ದ ಕೃಷ್ಣಂ, ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು ಮತ್ತು ಕಾರ್ಯಕ್ರಮದಿಂದ ಗೈರಾಗುವ ತಮ್ಮದೇ ಪಕ್ಷದ ನಿರ್ಧಾರವನ್ನು ಟೀಕಿಸಿದ್ದರು.

ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.

ಕೃಷ್ಣಂ ಅವರು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು ಮತ್ತು ಫೆಬ್ರವರಿ 19 ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com