ಅಯೋಧ್ಯೆ ರಾಮಲಲ್ಲಾ ದರ್ಶನ ಪಡೆಯಲಿರುವ ಮಹಾರಾಷ್ಟ್ರ ಕ್ಯಾಬಿನೆಟ್: ಫಡ್ನವಿಸ್

ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವರು ಶೀಘ್ರವೇ ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲ್ಲಾ ದರ್ಶನ ಪಡೆಯಲಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್

ಮುಂಬೈ:  ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವರು ಶೀಘ್ರವೇ ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲ್ಲಾ ದರ್ಶನ ಪಡೆಯಲಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಜ.022 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿತ್ತು. ಅಯೋಧ್ಯೆಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವ ವಿಷಯವಾಗಿ ಹೆಚ್ಚಿನ ಮಾಹಿತಿಯನ್ನು ಫಡ್ನವೀಸ್ ಹಂಚಿಕೊಂಡಿಲ್ಲ. 

ಕಾಶಿ ಮತ್ತು ಮಥುರಾದಲ್ಲಿನ ಇದೇ ರೀತಿಯ ದೇವಾಲಯ ವಿವಾದಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಫಡ್ನವೀಸ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಖಾತ್ರಿಪಡಿಸಿದ ರೀತಿಯಲ್ಲಿ (ಸುಪ್ರೀಂ ಕೋರ್ಟ್ ತೀರ್ಪಿನ ನಂತರ) ಕಾನೂನು ಚೌಕಟ್ಟಿನೊಳಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಮಥುರಾ, ಕಾಶಿ ಮತ್ತು ಅಯೋಧ್ಯೆ ಎಲ್ಲವೂ ಪವಿತ್ರ ಸ್ಥಳಗಳು ಎಂದು ಪ್ರತಿಪಾದಿಸಿದ ಫಡ್ನವಿಸ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾದಲ್ಲಿ (ಕೃಷ್ಣ ಜನ್ಮಭೂಮಿ) ವಿವಾದಕ್ಕೂ ಜನರು ಪರಿಹಾರವನ್ನು ನಿರೀಕ್ಷಿಸುವುದು ಸಹಜ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com