ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ್ ಚವಾಣ್ ಕಾಂಗ್ರೆಸ್ ಗೆ ಗುಡ್ ಬೈ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್
ಕಾಂಗ್ರೆಸ್ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್

ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಇಂದು ಅಶೋಕ್ ಚವಾಣ್ ಅವರು ಮುಂಬೈನಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿಯಾದ ನಂತರ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹುಟ್ಟಿಕೊಂಡಿದ್ದು, ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ಬೆನ್ನಲ್ಲೇ ಈ ವದಂತಿಗಳು ಬಲವಾಗಿವೆ.

ಮಹಾರಾಷ್ಟ್ರದಲ್ಲಿ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆಯೇ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ್ ಚವಾಣ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅಲ್ಲದೆ ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಮೂಲಗಳ ಪ್ರಕಾರ ಅಶೋಕ್ ಚಾವಾಣ್ ರನ್ನು ಬಿಜೆಪಿ ರಾಜ್ಯಸಭೆಗೆ ಆಯ್ಕೆ ಮಾಡಬಹುದು ಎಂದು ಹೇಳಲಾಗಿದೆ.

2ನೇ ಆಘಾತ
ಕಾಂಗ್ರೆಸ್ ಒಂದು ತಿಂಗಳ ಅವಧಿಯಲ್ಲಿ 2ನೇ ಆಘಾತ ಇದಾಗಿದ್ದು, ತಿಂಗಳ ಹಿಂದಷ್ಟೇ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಳೆದ ತಿಂಗಳು ಪಕ್ಷವನ್ನು ತೊರೆದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದರು. ಅಂತೆಯೇ ಮಾಜಿ ರಾಜ್ಯ ಸಚಿವ ಬಾಬಾ ಸಿದ್ದಿಕ್ ಪಕ್ಷವನ್ನು ತೊರೆದು ಈ ತಿಂಗಳ ಆರಂಭದಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಪಕ್ಷಾಂತರವಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com