ಯುಎಇಗೆ ಹೊರಟ ಪ್ರಧಾನಿ ಮೋದಿ
ದೇಶ
ಎರಡು ದಿನಗಳ ಯುಎಇ, ಕತಾರ್ ಪ್ರವಾಸಕ್ಕೆ ಪ್ರಧಾನಿ ಮೋದಿ ಪ್ರಯಾಣ: ದ್ವಿಪಕ್ಷೀಯ ಸಂಬಂಧ ವರ್ಧನೆಗೆ ಒತ್ತು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿದರು.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿದರು.
2015 ರಿಂದ ಏಳನೇ ಬಾರಿ ಮತ್ತು ಕಳೆದ ಎಂಟು ತಿಂಗಳಲ್ಲಿ ಯುಎಇಗೆ ಪ್ರಧಾನಿ ಮೋದಿಯವರು ಭೇಟಿ ನೀಡುತ್ತಿರುವುದು ಇದು ಮೂರನೇ ಬಾರಿ.
ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಈ ಸಭೆಯು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಸಾಧ್ಯತೆಯಿದೆ.
ನಂತರ ಪ್ರಧಾನಿಯವರು ಯುಎಇ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವ ಶೇಖ್ ಮೊಹಮ್ಮದ್ ಬಿನ್ ರಶೀದ್ ಐ ಮಕ್ತೌಮ್ ಅವರನ್ನು ಸಹ ಭೇಟಿಯಾಗಲಿದ್ದಾರೆ. ಅಲ್ಲಿ ವಿಶ್ವ ಸರ್ಕಾರ ಶೃಂಗಸಭೆ 2024 ರಲ್ಲಿ ಪ್ರಧಾನಿಯವರು ಭಾಗವಹಿಸಿ ವಿಶೇಷ ಪ್ರಮುಖ ಭಾಷಣ ನೀಡಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ