ನಾಳೆ ಸರ್ಕಾರದೊಂದಿಗೆ ರೈತರ ಮಾತುಕತೆಗೆ ವೇದಿಕೆ ಸಿದ್ಧ

ಬೇಡಿಕೆ ಈಡೇರಿಕೆಗಾಗಿ "ದೆಹಲಿ ಚಲೋ" ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ನಾಳೆ ಕೇಂದ್ರ ಸಚಿವರು ಮಾತುಕತೆ ನಡೆಸಲಿದ್ದಾರೆ.
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)

ಚಂಡೀಗಢ: ಬೇಡಿಕೆ ಈಡೇರಿಕೆಗಾಗಿ "ದೆಹಲಿ ಚಲೋ" ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ನಾಳೆ ಕೇಂದ್ರ ಸಚಿವರು ಮಾತುಕತೆ ನಡೆಸಲಿದ್ದಾರೆ.

ಚಂಡೀಗಢದಲ್ಲಿ ಮಾತುಕತೆ ನಡೆಯಲಿದ್ದು, ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪೀಯೂಷ್ ಗೋಯಲ್, ನಿತ್ಯಾನಂದ ರೈ ಸಂಜೆ 5 ಗಂಟೆಗೆ ರೈತ ನಾಯಕ ಸರ್ವನ್ ಸಿಂಗ್ ಪಂದರ್ ಜೊತೆ ಸಭೆ ನಡೆಸಲಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳ ಕುರಿತು ರೈತ ಮುಖಂಡರು ಮತ್ತು ಕೇಂದ್ರದ ನಡುವೆ ಇದು ಮೂರನೇ ಸುತ್ತಿನ ಸಭೆಯಾಗಿದೆ.

ಈ ಹಿಂದೆ, ಎರಡು ಕಡೆಯ ನಡುವಿನ ಎರಡು ಸಭೆಗಳಲ್ಲಿ ಯಾವುದೇ ಪ್ರಗತಿಯಾಗಿಲ್ಲ.  ಬೆಳೆಗಳಿಗೆ MSP ಮೇಲಿನ ಕಾನೂನು ಮತ್ತು ಸಾಲ ಮನ್ನಾ ಸೇರಿದಂತೆ ತಮ್ಮ ಬೇಡಿಕೆಗಳಿಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ 'ದೆಹಲಿ ಚಲೋ' ಆಂದೋಲನವನ್ನು ಮುನ್ನಡೆಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com