ಅಸ್ಸಾಂನಲ್ಲಿ 'ಕೈ'ಗೆ ಹಿನ್ನಡೆ: ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರಿಬ್ಬರ ಬೆಂಬಲ

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್‌ನ ಇಬ್ಬರು ಹಾಲಿ ಶಾಸಕರು ಬಿಜೆಪಿ ಸರ್ಕಾರಕ್ಕೆ ನೇರವಾಗಿ ಬೆಂಬಲ ನೀಡುವುದಾಗಿ ಘೋಷಿಸಿರುವುದು ಕಾಂಗ್ರೆಸ್‌ಗೆ ಭಾರಿ ಮುಖಭಂಗ ತಂದಿದೆ. 
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್‌ನ ಇಬ್ಬರು ಹಾಲಿ ಶಾಸಕರು ಬಿಜೆಪಿ ಸರ್ಕಾರಕ್ಕೆ ನೇರವಾಗಿ ಬೆಂಬಲ ನೀಡುವುದಾಗಿ ಘೋಷಿಸಿರುವುದು ಕಾಂಗ್ರೆಸ್‌ಗೆ ಭಾರಿ ಮುಖಭಂಗ ತಂದಿದೆ. 

ಇದರ ಬೆನ್ನಲ್ಲೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಕೆಣಕುವ ಅವಕಾಶವನ್ನು ಬಿಡಲಿಲ್ಲ. ಪ್ರಮುಖ ಬೆಳವಣಿಗೆಗಳ ನಂತರ ಭಾರತ್ ಜೋಡೋ ಯಾತ್ರೆಯು ಕಾಂಗ್ರೆಸ್ ಟೊಡೊ ಯಾತ್ರೆಯಾಗಿದೆ ಎಂದು ಲೇವಡಿ ಮಾಡಿದರು.

ಅಸ್ಸಾಂ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ದಿನದ ಕಲಾಪ ಪ್ರಾರಂಭವಾಗುವ ಮೊದಲು, ಇಬ್ಬರು ಕಾಂಗ್ರೆಸ್ ಶಾಸಕರಾದ ಕಮಲಾಕ್ಷ ಡಿ ಪುರ್ಕಾಯಸ್ಥ ಮತ್ತು ಬಸಂತ ದಾಸ್ ಅವರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಭೇಟಿಯಾಗಿ ವಿರೋಧ ಪಕ್ಷದ ಪಾಳೆಯದಲ್ಲಿದ್ದರೂ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದರು. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಬ್ಬರೂ ಶಾಸಕರನ್ನು ಸ್ವಾಗತಿಸಿ ಮಾಧ್ಯಮಗಳ ಮುಂದೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದರು.

ನಾಲ್ಕು ಶಾಸಕರಾದ ಕಮಲಾಕ್ಷ ಡಿ ಪುರ್ಕಾಯಸ್ಥ, ಬಸಂತ್ ದಾಸ್, ಶಶಿಕಾಂತ್ ದಾಸ್ ಮತ್ತು ಸಿದ್ದಿಕಿ ಅಹ್ಮದ್ ಅವರೊಂದಿಗೆ ಮುಖ್ಯಮಂತ್ರಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ಇಬ್ಬರು ಕಾಂಗ್ರೆಸ್ ಶಾಸಕರಾದ ಶಶಿಕಾಂತ್ ದಾಸ್ ಮತ್ತು ಸಿದ್ದಿಕಿ ಅಹ್ಮದ್ ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದರು. ಈ ಕಾರಣದಿಂದಾಗಿ ಇಬ್ಬರೂ ಶಾಸಕರು ಪ್ರಸ್ತುತ ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಕೆಲಸಗಳಿಂದ ಆಕರ್ಷಿತರಾಗಿ ಶಾಸಕರಾದ ಕಮಲಾಕ್ಷ ಪುರಕಾಯಸ್ಥ ಮತ್ತು ಬಸಂತ್ ದಾಸ್ ಅವರು ಬಿಜೆಪಿಗೆ ಬೇಷರತ್ ಬೆಂಬಲ ನೀಡಲು ಮುಂದೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಅವರು ಪ್ರತಿನಿಧಿಸುವ ಎರಡೂ ಕ್ಷೇತ್ರಗಳಲ್ಲಿ ಸರ್ಕಾರ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ಎಂದು ಶರ್ಮಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com