
ನವದೆಹಲಿ: ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿ ಇಬಿಎಸ್ (Electoral Bond Scheme)ನ್ನು ನಿಷೇಧಿಸಿದ್ದು, ಸುಪ್ರೀಂ ಕೋರ್ಟ್ ನಡೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ನಾಯಕರ ಪ್ರತಿಕ್ರಿಯೆ ಇಲ್ಲಿದೆ.
2019 ರಿಂದ ಎಷ್ಟು ದೇಣಿಗೆ ಬಂದಿದೆ, ಎಷ್ಟು ಹಣವನ್ನು ರಾಜಕೀಯ ಪಕ್ಷಗಳು ಬಳಸಿಕೊಂಡಿದೆ ಎಂದು ಮಾಹಿತಿ ನೀಡಲು ಇದೇ ವೇಳೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಕಪ್ಪು ಹಣಕ್ಕೆ ಕಡಿವಾಣ ಹಾಕಲು ಚುನಾವಣಾ ಬಾಂಡ್ ಯೋಜನೆ ಒಂದೇ ದಾರಿಯಲ್ಲ ಅದಕ್ಕೆ ಪರ್ಯಾಯ ಮಾರ್ಗಗಳಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುಪ್ರೀಂ ಕೋರ್ಟ್ ಹೇಳಿದೆ. 15 ದಿನಗಳ ಸಿಂಧುತ್ವ ಇರುವ ಚುನಾವಣಾ ಬಾಂಡ್ ಗಳನ್ನು ರಾಜಕೀಯ ಪಕ್ಷಗಳು ನಗದು ರೂಪಕ್ಕೆ ಪರಿವರ್ತನೆಗೊಳಿಸದೇ ಇದ್ದಲ್ಲಿ ಅದನ್ನು ಖರೀದಿಸಿರುವವರಿಗೆ ವಾಪಸ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬ್ಯಾಂಕ್ ಗಳು ಬಾಂಡ್ ಗಳನ್ನು ವಾಪಸ್ ಪಡೆದು ಖರೀದಿದಾರರಿಗೆ ಹಣವನ್ನು ವಾಪಸ್ ನೀಡಬೇಕಿದೆ.
ಸುಪ್ರೀಂ ಕೋರ್ಟ್ ಆದೇಶದ ಇನ್ನಿತರ ಮುಖ್ಯಾಂಶಗಳು
ಮಾ.06 ರ ವೇಳೆಗೆ ಎಸ್ ಬಿಐ (SBI) ಚುನಾವಣಾ ಆಯೋಗಕ್ಕೆ (Election Commission ) ಚುನಾವಣಾ ಬಾಂಡ್ (electoral bonds ) ಗಳ ಕುರಿತು ಮಾಹಿತಿಯನ್ನು ಸಲ್ಲಿಸಬೇಕು
ರಾಜಕೀಯ ಪಕ್ಷಗಳು ನಗದಾಗಿ ಪರಿವರ್ತಿಸಿಕೊಂಡ ಪ್ರತಿಯೊಂದು ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ನಗದಿನ ದಿನಾಂಕ, ಮುಖಬೆಲೆ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗಿಳಿಸಬೇಕು
ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ 13 ರೊಳಗೆ SBI ಹಂಚಿಕೊಂಡ ಮಾಹಿತಿಯನ್ನು ಪ್ರಕಟಿಸಬೇಕು.
Advertisement