ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾಂಗ್ರೆಸ್ ಹೇಳಿದ್ದೇನೆಂದರೆ...
ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದ್ದು, ಮತಗಳನ್ನು ಹಣಕ್ಕಿಂತ ಶಕ್ತಿಶಾಲಿಯನ್ನಾಗಿಸುತ್ತದೆ ಎಂದು ತೀರ್ಪನ್ನು ವಿಶ್ಲೇಷಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) "ಹೆಚ್ಚು ಪ್ರಚಾರ ಪಡೆದಿದ್ದ, ಮೋದಿ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಹಾಗೂ ಸಂಸತ್ ನಲ್ಲಿ ಅಂಗೀಕರಿಸಿದ್ದ ಕಾನೂನನ್ನು ಉಲ್ಲಂಘನೆ ಮಾಡುತ್ತದೆ" ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ.
ಬಹುನಿರೀಕ್ಷಿತ ತೀರ್ಪು ಸ್ವಾಗತಾರ್ಹವಾಗಿದ್ದು, ಮತಗಳನ್ನು ನೋಟುಗಳಿಗಿಂತ ಬಲಪಡಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಮೋದಿ ಸರ್ಕಾರ ಅನ್ನದಾತರಿಗೆ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ, ಚಂದಾದಾತರಿಗೆ ಮಾತ್ರ ಹೆಚ್ಚಿನ ಸವಲತ್ತು ಒದಗಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಮೋದಿ ಸರ್ಕಾರ ಅನ್ನದಾತರಿಗೆ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ, ಚಂದಾದಾತರಿಗೆ ಮಾತ್ರ ಹೆಚ್ಚಿನ ಸವಲತ್ತು ಒದಗಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಚುನಾವಣಾ ಬಾಂಡ್ ಗಳದ್ದಷ್ಟೇ ಅಲ್ಲದೇ ವಿವಿ ಪ್ಯಾಟ್ ವಿಷಯವಾಗಿ ರಾಜಕೀಯ ಪಕ್ಷಗಳನ್ನು ಭೇಟಿ ಮಾಡುವುದಕ್ಕೂ ನಿರಾಕರಿಸುತ್ತಿರುವ ಚುನಾವಣಾ ಆಯೋಗದ ನಡೆಯನ್ನು ಕೋರ್ಟ್ ಗಮನಿಸುತ್ತದೆ ಎಂಬ ವಿಶ್ವಾಸವನ್ನು ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ.ಮತದಾನ ಪ್ರಕ್ರಿಯೆಯಲ್ಲಿ ಎಲ್ಲವೂ ಪಾರದರ್ಶಕವಾಗಿದ್ದರೆ ಈ ಹಠಮಾರಿತನ ಏಕೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಚುನಾವಣಾ ಬಾಂಡ್ ಯೋಜನೆ ಸಂವಿಧಾನದ ಅಡಿಯಲ್ಲಿ ಮಾಹಿತಿ ಹಕ್ಕು ಮತ್ತು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ