ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಚಂದೌಲಿಯಲ್ಲಿನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ಆದರೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪ್ರಿಯಾಂಕ ಗಾಂಧಿಯವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಯುಪಿ ಬಿಜೆಪಿ, ಇದು ಸಹೋದರ, ಸಹೋದರಿ ನಡುವಿನ ವೈಮನಸು ಸೂಚಿಸುತ್ತದೆ ಎಂದು ಆರೋಪಿಸಿದೆ.

ಪ್ರಿಯಾಂಕಾ ಗಾಂಧಿ
ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ಅಮ್ಮನ ಕ್ಷೇತ್ರ ರಾಯ್‌ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?

ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶದ ಚಂದೌಲಿಗೆ ತಲುಪಿದ್ದು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಯುಪಿ ಕಾಂಗ್ರೆಸ್​ ನಾಯಕರು ಮಾಡಿದ್ದಾರೆ. ಆದರೆ ಈ ಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದು ಅನಾರೋಗ್ಯದ ಕಾರಣ ನಾನು ಆಸ್ಪತ್ರೆಗೆ ದಾಖಲು ಆಗಿದ್ದೇನೆ. ಶೀಘ್ರದಲ್ಲೇ ಅನಾರೋಗ್ಯದಿಂದ ಚೇರಿಸಿಕೊಂಡು ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಯಾತ್ರೆಗಾಗಿ ಎಲ್ಲ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿರುವ ಯುಪಿಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ​

ಯಾತ್ರೆಯಲ್ಲಿ ತಾನು ಭಾಗಿಯಾಗದ ಹಿನ್ನೆಲೆಯಲ್ಲಿ ಭಾರತ್ ನ್ಯಾಯ್ ಯಾತ್ರೆಯಲ್ಲಿ ಶ್ರಮಿಸಿದ ಎಲ್ಲಾ ನನ್ನ ಸಹೋದ್ಯೋಗಿಗಳು, ಯಾತ್ರಿಗಳು ಹಾಗೂ ನನ್ನ ಸಹೋದರನಿಗೆ ಶುಭಹಾರೈಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಯಾವಾಗ ಯಾತ್ರೆ ಉತ್ತರ ಪ್ರದೇಶ ತಲುಪಿತೋ ಅವಾಗಲೇ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಕಾಂಗ್ರೆಸ್​ ನಾಯಕರ ಮಧ್ಯದ ಭಿನ್ನಾಭಿಪ್ರಾಯ, ಬಿರುಕು ಮೂಡಿದೆ ಎಂಬುದು ಹೇಳುತ್ತದೆ. ಸಹೋದರ-ಸಹೋದರಿ ಮಧ್ಯೆ ಕಿತ್ತಾಟವಿದೆ. ಕಾಂಗ್ರೆಸ್​ ಪಕ್ಷದಲ್ಲಿ ಎಲ್ಲವು ಸರಿಯಾಗಿಲ್ಲ ಎಂದು ಯುಪಿಯ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com