ನವದೆಹಲಿ: ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪೆಂಡಲ್ ಕುಸಿತ; 11 ಮಂದಿ ರಕ್ಷಣೆ

ದಕ್ಷಿಣ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ತಾತ್ಕಾಲಿಕವಾಗಿ ಹಾಕಲಾಗಿದ್ದ ಪೆಂಡಲ್ ಕುಸಿದು ಅವಶೇಷಗಳಡಿ ಸಿಲುಕಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಟೇಡಿಯಂನಲ್ಲಿ ಪೆಂಡಲ್ ಕುಸಿತ
ಸ್ಟೇಡಿಯಂನಲ್ಲಿ ಪೆಂಡಲ್ ಕುಸಿತANI

ನವದೆಹಲಿ: ದಕ್ಷಿಣ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ತಾತ್ಕಾಲಿಕವಾಗಿ ಹಾಕಲಾಗಿದ್ದ ಪೆಂಡಲ್ ಕುಸಿದು ಅವಶೇಷಗಳಡಿ ಸಿಲುಕಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೇಡಿಯಂನ ಗೇಟ್ ನಂಬರ್ 2 ರ ಬಳಿ ತಾತ್ಕಾಲಿಕವಾಗಿ ಹಾಕಲಾಗಿದ್ದ ಪೆಂಡಲ್ ಕುಸಿದಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಇಲ್ಲಿಯವರೆಗೆ, ಅವಶೇಷಗಳಡಿಯಿಂದ ಸಿಲುಕಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಆರಂಭದಲ್ಲಿ ಅವಶೇಷಗಳಡಿಯಿಂದ ಇಬ್ಬರನ್ನು ರಕ್ಷಿಸಲಾಯಿತು. ನಂತರ, ಇನ್ನೂ ಒಂಬತ್ತು ಜನರನ್ನು ಹೊರಗೆ ತರಲಾಗಿತು. ಗಾಯಗೊಂಡವರಲ್ಲಿ ಹೆಚ್ಚಿನವರು ಕಾರ್ಮಿಕರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೇಟ್ ಸಂಖ್ಯೆ 2 ರ ಬಳಿ ಮದುವೆ ಕಾರ್ಯಕ್ರಮಕ್ಕಾಗಿ ಪೆಂಡಲ್ ಹಾಕಲಾಗಿತ್ತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದೆ. ಇದುವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಹೇಳಿದರು.

ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ ಎಂದು ಅಧಿಕಾರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com