ಅಮರಾವತಿಯಲ್ಲಿ ಭೀಕರ ಅಪಘಾತ: ಟೆಂಪೋಗೆ ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ

ಮಹಾರಾಷ್ಟ್ರದ ಅಮರಾವತಿಯಲ್ಲಿ ಟೆಂಪೋ-ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಮರಾವತಿ: ಮಹಾರಾಷ್ಟ್ರದ ಅಮರಾವತಿಯಲ್ಲಿ ಟೆಂಪೋ-ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ನಂದಗಾಂವ್ ಖಂಡೇಶ್ವರ ತಾಲೂಕಿನ ಶಿಂಗ್ಣಾಪುರ ಫಾಟಾದಲ್ಲಿ ಬೆಳಗ್ಗೆ 7:30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಟೆಂಪೋದಲ್ಲಿ ಅಮರಾವತಿ ನಗರದ ಕ್ರಿಕೆಟ್ ತಂಡದ 21 ಸದಸ್ಯರಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಆನಂದ್ ಅವರು ಮಾಹಿತಿ ನೀಡಿದ್ದಾರೆ.

ಸಂಗ್ರಹ ಚಿತ್ರ
ಆಂಧ್ರ ಪ್ರದೇಶದ ನೆಲ್ಲೂರು ಬಳಿ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ, 15 ಮಂದಿಗೆ ಗಾಯ

ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, 10 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com