ಉತ್ತರಪ್ರದೇಶ: 1 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕಾಮುಕ ಬಂಧನ

ಒಂದು ವರ್ಷದ ಮಗುವಿನ ಮೇಲೆ 50 ವರ್ಷದ ವ್ಯಕ್ತಯೊಬ್ಬ ಅತ್ಯಾಚಾರವೆಸಗಿರುವ ಘಟನೆಯೊಂದು ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಹ್ರೈಚ್: ಒಂದು ವರ್ಷದ ಮಗುವಿನ ಮೇಲೆ 50 ವರ್ಷದ ವ್ಯಕ್ತಯೊಬ್ಬ ಅತ್ಯಾಚಾರವೆಸಗಿರುವ ಘಟನೆಯೊಂದು ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ನಡೆದಿದೆ.

ನನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾಮುಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಭಾರತ ಹಾಕಿ ತಂಡದ ಆಟಗಾರನ ವಿರುದ್ಧ FIR

ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದರೂ ಮಕ್ಕಳ ವೈದ್ಯರಿಂದ ಸಂಪೂರ್ಣ ಪರೀಕ್ಷೆ ನಡೆಸುವ ಸಲುವಾಗಿ ಲಖನೌಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com