ರಾಜಸ್ಥಾನ: ಕಾಂಗ್ರೆಸ್‌ಗೆ ದೂರದೃಷ್ಟಿ ಇಲ್ಲ; ಬಿಜೆಪಿಗೆ ಸೇರ್ಪಡೆಯಾದ ಶಾಸಕ ಮಾಳವಿಯಾ

ಮಹೇಂದ್ರ ಜೀತ್ ಸಿಂಗ್ ಮಾಳವಿಯಾ
ಮಹೇಂದ್ರ ಜೀತ್ ಸಿಂಗ್ ಮಾಳವಿಯಾ

ಜೈಪುರ: ಲೋಕಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದು ಪಕ್ಷದ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.

ಮಹೇಂದ್ರ ಜೀತ್ ಸಿಂಗ್ ಮಾಳವಿಯಾ
ಉತ್ತಮ ಅಭ್ಯರ್ಥಿಗಳೊಂದಿಗೆ ಹೆಚ್ಚು ಪ್ರಯತ್ನ ಪಟ್ಟಿದ್ದರೆ ಕಾಂಗ್ರೆಸ್ ರಾಜಸ್ಥಾನ ಚುನಾವಣೆ ಗೆಲ್ಲಬಹುದಿತ್ತು: ಸಚಿನ್ ಪೈಲಟ್

ನಾಲ್ಕು ಬಾರಿಯ ಕಾಂಗ್ರೆಸ್ ಶಾಸಕ ಮತ್ತು ರಾಜಸ್ಥಾನದ ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವಿಯಾ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ರಾಜ್ಯದಲ್ಲಿ ಹಳೆಯ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಮಾಳವಿಯಾ ಅವರನ್ನು ಬಿಜೆಪಿ ರಾಜಸ್ಥಾನ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಮುಖ್ಯಸ್ಥ ಸಿಪಿ ಜೋಶಿ ಮತ್ತು ಇತರ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು.

ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಮಹೇಂದ್ರಜೀತ್ ಮಾಳವಿಯಾ, ವಾಗಡ್ ಪ್ರದೇಶದ ಅಭಿವೃದ್ಧಿಯ ಏಕೈಕ ಕಾರಣದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್‌ಗೆ ದೂರದೃಷ್ಟಿ ಇಲ್ಲ. ಬಿಜೆಪಿ ಸೇರಿದ ನಂತರ ನಾನು ಇನ್ನೂ ಕಾಂಗ್ರೆಸ್‌ ಶಾಸಕನಾಗಿ ಉಳಿಯುವುದು ಹೇಗೆ? ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com