ಫೆಬ್ರವರಿ 21ರವರೆಗೆ ದೆಹಲಿ ಚಲೋಗೆ ಬ್ರೇಕ್: ಕೇಂದ್ರದ ಎಂಎಸ್‌ಪಿ ಪ್ರಸ್ತಾವನೆ ಕುರಿತು ರೈತರಿಂದ ಚರ್ಚೆ

ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಭಾನುವಾರ ದೆಹಲಿಯಲ್ಲಿ ನಡೆದ ನಾಲ್ಕನೇ ಸುತ್ತಿನ ಸಭೆಯ ನಂತರ, ‘ದಿಲ್ಲಿ ಚಲೋ’ ಪ್ರತಿಭಟನೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.
ರೈತರಿಂದ ದೆಹಲಿ ಚಲೋ ಪ್ರತಿಭಟನೆ
ರೈತರಿಂದ ದೆಹಲಿ ಚಲೋ ಪ್ರತಿಭಟನೆ

ಚಂಡೀಗಢ: ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಭಾನುವಾರ ದೆಹಲಿಯಲ್ಲಿ ನಡೆದ ನಾಲ್ಕನೇ ಸುತ್ತಿನ ಸಭೆಯ ನಂತರ, ‘ದಿಲ್ಲಿ ಚಲೋ’ ಪ್ರತಿಭಟನೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದ್ದು, ಸರ್ಕಾರದ ಪ್ರಸ್ತಾವನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೈತ ಮುಖಂಡರು ಸೋಮವಾರ ಹೇಳಿದ್ದಾರೆ. ಹೀಗಾಗಿ ಫೆಬ್ರವರಿ 21ರ ವರಗೆ ದೆಹಲಿ ಚಲೋಗೆ ವಿರಾಮ ನೀಡಲಾಗಿದ್ದು, ಮತ್ತೆ ಬುಧವಾರದಿಂದ ಪ್ರತಿಭಟನೆ ಶಾಂತಿಯುತವಾಗಿ ಪುನರಾರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

“ನಾವು ಕೃಷಿ ತಜ್ಞರು ಮತ್ತು ಕಾನೂನು ತಜ್ಞರೊಂದಿಗೆ ಸರ್ಕಾರ ನೀಡಿದ ಪ್ರಸ್ತಾವನೆಗಳ ಬಗ್ಗೆ ಚರ್ಚಿಸುತ್ತೇವೆ ಮತ್ತು ನಂತರ ಅದರ ಬಗ್ಗೆ ನಮ್ಮ ನಿರ್ಧಾರವನ್ನು ಕೇಂದ್ರಕ್ಕೆ ತಿಳಿಸುತ್ತೇವೆ. ನಮ್ಮ ದೆಹಲಿ ಚಲೋ ಸದ್ಯಕ್ಕೆ ಸ್ಟ್ಯಾಂಡ್‌ಬೈನಲ್ಲಿ ಇರಿಸಿದ್ದೇವೆ. ಆದಾಗ್ಯೂ, ಫೆಬ್ರವರಿ 21 ರಂದು, ನಾವು ನಮ್ಮ ಪ್ರತಿಭಟನಾ ಮೆರವಣಿಗೆಯನ್ನು ಶಾಂತಿಯುತವಾಗಿ ಪ್ರಾರಂಭಿಸುತ್ತೇವೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಅವರು ಹೇಳಿದ್ದಾರೆ.

ಶಂಭು ಗಡಿ ಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಂಧೇರ್, ಕೇಂದ್ರ ನೀಡಿರುವ ಪ್ರಸ್ತಾವನೆ ಕುರಿತು ರೈತರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ರೈತರಿಂದ ದೆಹಲಿ ಚಲೋ ಪ್ರತಿಭಟನೆ
"ನಮ್ಮ ಧ್ವನಿ ಅಡಗಿಸಲಾಗುತ್ತಿದೆ": ಕೇಂದ್ರದಿಂದ ರೈತರ ಸಾಮಾಜಿಕ ಜಾಲತಾಣಗಳು ಸ್ಥಗಿತ- ರೈತ ನಾಯಕ

ಕನಿಷ್ಠ ಬೆಂಬಲ ಬೆಲೆಯನ್ನು(ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿಗೆ ತರಬೇಕು ಎಂಬ ಬೇಡಿಕೆಯಿಂದ ರೈತರು ಹಿಂದೆ ಸರಿದಿಲ್ಲ ಮತ್ತು ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಪಂಧೇರ್ ಉತ್ತರಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಭಾನುವಾರ ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com