'ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ': ತಡರಾತ್ರಿ ಸಂಧಾನದ ಬಳಿಕ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆ!

ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಯಶ ಕಂಡಿದೆಎಂದು ಹೇಳಲಾಗಿದ್ದು, 'ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಕೇಂದ್ರ ಸಚಿವ ಪಿಯೂಷ್ ಗೋಯಲ್
ಕೇಂದ್ರ ಸಚಿವ ಪಿಯೂಷ್ ಗೋಯಲ್ANI

ನವದೆಹಲಿ: ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಯಶ ಕಂಡಿದೆಎಂದು ಹೇಳಲಾಗಿದ್ದು, 'ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೀಯೂಷ್ ಗೋಯಲ್, 'ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಸರ್ಕಾರಿ ಸಂಸ್ಥೆಗಳಿಂದ ಖರೀದಿಸುವ ಪ್ರಸ್ತಾವನ್ನು ಸಮಿತಿಯು ರೈತರ ಮುಂದೆ ಇಟ್ಟಿದೆ. ಸರ್ಕಾರದ ಈ ಪ್ತಸ್ತಾಪವನ್ನು ತಮ್ಮ ವಲಯದಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ತಮ್ಮ ಮುಂದಿನ ನಡೆಯನ್ನು ತಿಳಿಸುವುದಾಗಿ ರೈತ ನಾಯಕರು ಹೇಳಿದ್ದಾರೆ. ಹುರಳಿ ಬೇಳೆ, ಉದ್ದಿನ ಬೇಳೆ, ಮಸೂರ್‌ ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ 5 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲಯಲ್ಲಿ ಖರೀದಿಸಲು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಹಾಗೂ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಹೇಳಿದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್
ರೈತರ ಪ್ರತಿಭಟನೆ ಶಮನಕ್ಕೆ ಕೇಂದ್ರ ಸಂಧಾನ; ಪ್ರತಿಭಟನೆಗೆ ತಾತ್ಕಾಲಿಕ ತಡೆ, ಸರ್ಕಾರದ ಪ್ರಸ್ತಾವ ಕುರಿತು 2 ದಿನ ಚರ್ಚೆ

ಅಲ್ಲದೆ ಈ ಖರೀದಿಯ ಪ್ರಮಾಣಕ್ಕೆ ಯಾವುದೇ ಮಿತಿ ಇಲ್ಲ. ಇದಕ್ಕಾಗಿ ಹೊಸ ಪೋರ್ಟಲ್ ಒಂದನ್ನು ಅಭಿವೃದ್ಧಿ ಪಡಿಸಲಾಗುವುದು. ಇದು ಪಂಜಾಬ್‌ನ ಕೃಷಿಯನ್ನು ಕಾಪಾಡುವುದಲ್ಲದೆ, ಅಂತರ್ಜಲ ಮಟ್ಟವನ್ನೂ ಹೆಚ್ಚಿಸುತ್ತದೆ. ಜೊತೆಗೆ ಭೂಮಿ ಬಂಜರಾಗುವುದನ್ನು ತಡೆಯಲಿದೆ ಎಂದು ಹೇಳಿದರು.

ಕೇಂದ್ರದ ಪ್ರಸ್ತಾವಗಳ ಬಗ್ಗೆ ಮಾತನಾಡಿದ ರೈತ ನಾಯಕ ಸರ್ವನ್‌ ಸಿಂಗ್‌ ಪಂದೆರ್‌, ‘ಫೆ. 19–20ರಂದು ಇದನ್ನು ನಮ್ಮ ವೇದಿಕೆಯಲ್ಲಿ ಚರ್ಚಿಸುತ್ತೇವೆ. ಇದರ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು, ನಿರ್ಧಾರ ಪ್ರಕಟಿಸುತ್ತೇವೆ. ಸಾಲ ಮನ್ನಾ ಹಾಗೂ ಇತರ ಬೇಡಿಕೆಗಳ ಬಗ್ಗೆ ಚರ್ಚೆ ಬಾಕಿ ಇದ್ದು, ಇದೂ ಎರಡು ದಿನಗಳಲ್ಲಿ ಬಗೆಹರಿಯುವ ಸಾಧ್ಯತೆ ಇದೆ. ಅಲ್ಲದೆ ‘ದೆಹಲಿ ಚಲೋ’ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದು, ಸಮಸ್ಯೆಗಳು ಬಗೆಹರಿಯದಿದ್ದರೆ ಫೆ.21ರಂದು ಬೆಳಿಗ್ಗೆ 11 ಗಂಟೆಗೆ ಮತ್ತೆ ಪ್ರತಿಭಟನೆ ಮುಂದುವರಿಯಲಿದೆ’ ಎಂದು ತಿಳಿಸಿದರು.

ಈ ಹಿಂದೆ ಫೆ. 8,12 ಹಾಗೂ 15ರಂದು ರೈತ ಮುಖಂಡರು ಹಾಗೂ ಸಚಿವರ ನಡುವೆ ಮಾತುಕತೆ ನಡೆದಿದ್ದರೂ, ಒಂದು ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com