ಮಹಾರಾಷ್ಟ್ರ ಸರ್ಕಾರದಿಂದ ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರ

ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಏಕನಾಥ್ ಶಿಂಧೆ
ಏಕನಾಥ್ ಶಿಂಧೆ

ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಮಹಾರಾಷ್ಟ್ರ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿದ್ದು, ಶೇ. 50 ಮೀಸಲಾತಿ ಮಿತಿಯನ್ನು ಮೀರಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಸ್ತರಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿ ಸರ್ಕಾರ ಇಂದು ಅಂಗೀಕರಿಸಿದ ಶೇಕಡಾ 10ರಷ್ಟು ಮರಾಠ ಮೀಸಲಾತಿ ಮಸೂದೆಯು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಸರ್ಕಾರ ಪರಿಚಯಿಸಿದ್ದ ವಿಧೇಯಕವನ್ನೇ ಮುಂದುವರಿಸಲಾಗಿದೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ 2018 ರಂತೆಯೇ ಇದೆ. ಈ ಮೂಲಕ ದಶಕದಲ್ಲಿ ಮೂರನೇ ಬಾರಿಗೆ ಮರಾಠ ಮೀಸಲು ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.

ಏಕನಾಥ್ ಶಿಂಧೆ
ಮೀಸಲಾತಿ ಬೇಡಿಕೆ ಈಡೇರಿಕೆಗೆ 'ಮಹಾ' ಸರ್ಕಾರ ಒಪ್ಪಿಗೆ: ಪ್ರತಿಭಟನೆ ಹಿಂಪಡೆದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಜ್

ಈ ಮರಾಠ ಮೀಸಲಾತಿ ಮಸೂದೆ ಅಂಗೀಕರಿಸುವ ಸಂಬಂಧ ಮಹಾರಾಷ್ಟ್ರ ಸರ್ಕಾರ ಒಂದು ದಿನದ ವಿಶೇಷ ಅಧಿವೇಶನವನ್ನು ಕರೆದಿದೆ.

ಮರಾಠ ಸಮುದಾಯಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮೀಸಲು ನೀಡಬೇಕು ಎಂದು ಕಾರ್ಯಕರ್ತ ಮನೋಜ್​ ಜಾರಂಗೆ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದು ಸರ್ಕಾರದ ಮೇಲೆ ಒತ್ತಡ ಉಂಟು ಮಾಡಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com