ವಕೀಲ ಸಮುದಾಯದ ಭೀಷ್ಮ ಪಿತಾಮಹ, ಖ್ಯಾತ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ (95) ನಿಧನ

ಕಾವೇರಿ ಜಲ ವಿವಾದದಲ್ಲಿ ಕರ್ನಾಟಕ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಫಾಲಿ ಎಸ್ ನಾರಿಮನ್
ಫಾಲಿ ಎಸ್ ನಾರಿಮನ್

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಬುಧವಾರ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

1929 ರಂದು ಜನವರಿ 10 ರಂದು ಜನಿಸಿದ ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ ಆರಂಭಿಸಿದರು. 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.

ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972 ರಿಂದ, ನವದೆಹಲಿಯಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದರು. ಮೇ 1972 ರಲ್ಲಿ ಅವರು ಬಾಂಬೆಯಿಂದ ದೆಹಲಿಗೆ ಸ್ಥಳಾಂತರಗೊಂಡಾಗ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. ಜನವರಿ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

ಫಾಲಿ ಎಸ್ ನಾರಿಮನ್
ಕೊಲಿಜಿಯಂ ಶಿಫಾರಸ್ಸಿಗೆ ಕೇಂದ್ರದ ಅಡ್ಡಿ, ಪ್ರಜಾಪ್ರಭುತ್ವಕ್ಕೆ ಮಾರಕ: ಸುಪ್ರೀಂ ಮಾಜಿ ನ್ಯಾಯಮೂರ್ತಿ ನಾರಿಮನ್!

ನಾರಿಮನ್ ಅವರು 1991 ರಿಂದ 2010 ರವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು, 1989 ರಿಂದ 2005 ರವರೆಗೆ ICC (ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್) ಪ್ಯಾರಿಸ್ನ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್‌ನ ಉಪಾಧ್ಯಕ್ಷರಾಗಿದ್ದರು ಮತ್ತು ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್‌ನ ಅಧ್ಯಕ್ಷರಾಗಿದ್ದರು.

ಅವರು 1995 ರಿಂದ 1997 ರವರೆಗೆ ಜಿನೀವಾದಲ್ಲಿ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದರು. ಕಾವೇರಿ ಜಲ ವಿವಾದ ಪ್ರಕರಣದಲ್ಲಿ ಕರ್ನಾಟಕ ಪರ ನಾರಿಮನ್ ವಾದ ಮಂಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com