ಎಎಪಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ 3-4 ದಿನಗಳಲ್ಲಿ ಕೇಜ್ರಿವಾಲ್ ಬಂಧನ: ದೆಹಲಿ ಸಚಿವೆ ಅತಿಶಿ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಎಎಪಿ ಮೈತ್ರಿ ಮಾಡಿಕೊಂಡರೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
Chief Minister Arvind Kejriwal
Chief Minister Arvind Kejriwal

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಎಎಪಿ ಮೈತ್ರಿ ಮಾಡಿಕೊಂಡರೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ದೆಹಲಿ ಸಚಿವೆ ಅತಿಶಿ ಅವರು ಗುರುವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶನಿವಾರ ಅಥವಾ ಭಾನುವಾರ ಸಿಬಿಐ, ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಲಿದೆ ಎಂದು ತಿಳಿಸಿದ್ದಾರೆ.

"ಎಎಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಅಂತಿಮ ಹಂತಕ್ಕೆ ತಲುಪಿದೆ ಎಂಬ ಸುದ್ದಿಗಳು ಪ್ರಸಾರವಾಗುತ್ತಿರುವುದರಿಂದ. ಕಾಂಗ್ರೆಸ್‌ನೊಂದಿಗೆ ಎಎಪಿ ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡರೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು" ಎಂಬ ಸಂದೇಶಗಳು ಆಪ್ ನಾಯಕರಿಗೆ ಬುಧವಾರ ಸಂಜೆಯಿಂದ ಬರುತ್ತಿವೆ" ಎಂದು ಅವರು ಹೇಳಿದ್ದಾರೆ.

Chief Minister Arvind Kejriwal
ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!

ಶನಿವಾರ ಅಥವಾ ಭಾನುವಾರ ಸಿಬಿಐನಿಂದ ಮುಖ್ಯಮಂತ್ರಿಗೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ನಂತರ ಅವರನ್ನು ಬಂಧಿಸಲಾಗುವುದು ಎಂಬ ಸಂದೇಶಗಳು ಹರಿದಾಡುತ್ತಿವೆ ಎಂದು ದೆಹಲಿ ಸಚಿವರು ತಿಳಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ಜೈಲಿನಿಂದ ಹೊರಗಿಡುವ ಏಕೈಕ ಮಾರ್ಗವೆಂದರೆ ಎಎಪಿ, ಪ್ರತಿಪಕ್ಷಗಳ ಮೈತ್ರಿಕೂಟ ತೊರೆಯಬೇಕು ಎಂದು ಸಂದೇಶ ವಾಹಕರು ಹೇಳುತ್ತಿರುವುದಾಗಿ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com