ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೋರೆನ್‌ಗೆ ಅನುಮತಿ ನಿರಾಕರಿಸಿದ ಕೋರ್ಟ್

ರಾಜ್ಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬಂಧಿತ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.
ಹೇಮಂತ್ ಸೋರೆನ್
ಹೇಮಂತ್ ಸೋರೆನ್

ರಾಂಚಿ: ಶುಕ್ರವಾರದಿಂದ ಪ್ರಾರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬಂಧಿತ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಸೋರೆನ್ ಅವರು ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೋರೆನ್‌ಗೆ ಅನುಮತಿ ನಿರಾಕರಿಸಿದೆ.

ಹೇಮಂತ್ ಸೋರೆನ್
ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೋರೆನ್ ತನಿಖೆಗೆ ಸಹಕರಿಸುತ್ತಿಲ್ಲ: ಇಡಿ

ಜಾರಿ ನಿರ್ದೇಶನಾಲಯದ 13 ದಿನಗಳ ಕಸ್ಟಡಿ ಅಂತ್ಯಗೊಂಡ ನಂತರ ಫೆಬ್ರವರಿ 15 ರಂದು ಸೋರೆನ್ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮಾಜಿ ಸಿಎಂ ಪ್ರಸ್ತುತ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತದಲ್ಲಿ ಭಾಗವಹಿಸಲು ಸೋರೆನ್ ಅವರಿಗೆ ನ್ಯಾಯಾಲಯ ಈ ಹಿಂದೆ ಅವಕಾಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com