ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!

ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.
ಸಿಎಂ ಕೇಜ್ರಿವಾಲ್
ಸಿಎಂ ಕೇಜ್ರಿವಾಲ್PTI

ನವದೆಹಲಿ: ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 26 ರಂದು ಇಡಿ ಮುಂದೆ ಹಾಜರಾಗುವಂತೆ ದೆಹಲಿ ಸಿಎಂಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.

ಸಿಎಂ ಕೇಜ್ರಿವಾಲ್
ಹಣ ಅಕ್ರಮ ವರ್ಗಾವಣೆ ಪ್ರಕರಣ: ಆರನೇ ಬಾರಿಯ ಸಮನ್ಸ್ ಗೂ ಡೋಂಟ್ ಕೇರ್; ಇ.ಡಿ ವಿಚಾರಣೆಗೆ ಕೇಜ್ರಿವಾಲ್ ಗೈರು

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com