ಮೊಮ್ಮಗಳ ಮೇಲೆ ಅಜ್ಜನಿಂದ ಅತ್ಯಾಚಾರ; ಅಪ್ರಾಪ್ತ ಬಾಲಕಿ ಗರ್ಭಿಣಿ!

ಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರ ನಡೆಸಿರುವ ಘಟನೆ ನೆರೆಯ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ನಾಲ್ಕು ತಿಂಗಳ ಕಾಲ ಅತ್ಯಾಚಾರವೆಸಗಲಾಗಿದ್ದು, ಈಗ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯವಾಡ: ಮೊಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರ ನಡೆಸಿರುವ ಘಟನೆ ನೆರೆಯ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ನಾಲ್ಕು ತಿಂಗಳ ಕಾಲ ಅತ್ಯಾಚಾರವೆಸಗಲಾಗಿದ್ದು, ಈಗ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೋಪಿದೇವಿ ಗ್ರಾಮದ ಜಿಲ್ಲಾ ಪರಿಷತ್ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದು, ಆಕೆಯ ಪೋಷಕರು ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಅವನಿಗಡ್ಡಾ ಡಿಎಸ್ಪಿ ಮುರಳೀಧರ್ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಉತ್ತರಪ್ರದೇಶ: 1 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕಾಮುಕ ಬಂಧನ

ಮಂಗಳವಾರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರು ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸಂತ್ರಸ್ತೆಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com