ರಾಹುಲ್ ನ್ಯಾಯ್ ಯಾತ್ರೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಕಮಲ್ ನಾಥ್ ಕರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುವಂತೆ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಜನತೆಗೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಶುಕ್ರವಾರ ಕರೆ ನೀಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್
ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್PTI

ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುವಂತೆ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಜನತೆಗೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಶುಕ್ರವಾರ ಕರೆ ನೀಡಿದ್ದಾರೆ.

ರಾಹುಲ್ ಗಾಂಧಿ ದೇಶಾದ್ಯಂತ ಬೀದಿಗಿಳಿದು ಅನ್ಯಾಯದ ವಿರುದ್ಧ ನಿರ್ಣಾಯಕ ಹೋರಾಟ ಘೋಷಿಸಿರುವುದರಿಂದ ಪಕ್ಷದ ಕಾರ್ಯಕರ್ತರು ಅವರನ್ನು ಸ್ವಾಗತಿಸಲು ಉತ್ಸುಕರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಭಾರತ್ ಜೋಡೋ ಯಾತ್ರೆಯ ಎರಡನೇ ಆವೃತ್ತಿಯಲ್ಲಿ ನಾವೆಲ್ಲಾ ಒಟ್ಟಾಗಿ ಪಾಲ್ಗೊಳ್ಳುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವ ಎಂದು ಹೇಳುವ ಮೂಲಕ ಬಿಜೆಪಿ ಸೇರ್ತಾರೆ ಎಂಬ ಊಹಾಪೋಹಗಳಿಗೆ ಕೊನೆಯಾಡಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್
ಕಮಲ್ ನಾಥ್ ನಡೆ ನಿಗೂಢ; ಛಿಂದ್ವಾರದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಮಲ್ ನಾಥ್, ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಸ್ವಾಗತಿಸಲು ಮಧ್ಯಪ್ರದೇಶದ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉತ್ಸುಕರಾಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಬೀದಿಗಿಳಿದು ಅನ್ಯಾಯ, ದಬ್ಬಾಳಿಕೆ ಮತ್ತು ಶೋಷಣೆಯ ವಿರುದ್ಧ ನಿರ್ಣಾಯಕ ಹೋರಾಟವನ್ನು ಘೋಷಿಸಿದ್ದಾರೆ. ಮಧ್ಯಪ್ರದೇಶ ಮತ್ತು ಕಾಂಗ್ರೆಸ್‌ನ ಕೆಚ್ಚೆದೆಯ ಕಾರ್ಯಕರ್ತರು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಹುಲ್ ಗಾಂಧಿಯ ಶಕ್ತಿ ಮತ್ತು ಧೈರ್ಯವಾಗಲು ಜನರನ್ನು ಒತ್ತಾಯಿಸುತ್ತೇನೆ. ಅನ್ಯಾಯದ ವಿರುದ್ಧ ಒಟ್ಟಾಗಿ ಪಾಲ್ಗೊಳ್ಳುವ ಮೂಲಕ ಈ ಮಹಾನ್ ಅಭಿಯಾನವನ್ನು ಕೊನೆಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಕಮಲ್ ನಾಥ್ ಅವರ ಹೇಳಿಕೆಗಳು ಬಿಜೆಪಿ ಸೇರ್ತಾರೆ ಎಂಬ ಎಲ್ಲಾ ವದಂತಿಗಳಿಗೆ ಅಂತ್ಯ ಹಾಡಿದೆ. ಈ ಮಧ್ಯೆ ಕಮಲ್ ನಾಥ್ ಅವರ ಭದ್ರಕೋಟೆಯ ಮಧ್ಯ ಪ್ರದೇಶದ ಛಿಂದ್ವಾರಾ ಜಿಲ್ಲೆಯ ಹಲವು ಪಕ್ಷದ ಮುಖಂಡರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು. ಹೊಸದಾಗಿ ರಚಿಸಲಾದ ಪಾಂಡುರ್ನಾ ಜಿಲ್ಲೆಯಿಂದ 700 ಕ್ಕೂ ಹೆಚ್ಚು ಕಾಂಗ್ರೆಸ್ಸಿಗರು ಸೇರಿದಂತೆ 1,500 ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಚಿಂದ್ವಾರ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಜ್ವಲ್ ಸಿಂಗ್ ಚೌಹಾಣ್ ಸೇರಿದಂತೆ ಕೌನ್ಸಿಲರ್‌ಗಳು, ಸರಪಂಚ್‌ಗಳು, ಜನಪದ ಸದಸ್ಯರು ಮತ್ತು ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com