ಪ್ರತಿಭಟನಾನಿರತ ರೈತರ ವಿರುದ್ಧ ಹೊಸ ಅಸ್ತ್ರ ಪ್ರಯೋಗಕ್ಕೆ ಪೊಲೀಸರು ಮುಂದು; ಖಟ್ಟರ್ ಸರ್ಕಾರ ಯು-ಟರ್ನ್

1980ರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಬಳಸಿಕೊಂಡು ರಾಜ್ಯದ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರೈತ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಹರಿಯಾಣದ ಅಂಬಾಲಾ ಜಿಲ್ಲಾ ಪೊಲೀಸರು ಗುರುವಾರ ಕ್ರಮ ಕೈಗೊಂಡಿದ್ದಾರೆ.
ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.
ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.

ಚಂಡೀಗಢ: 1980ರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಬಳಸಿಕೊಂಡು ರಾಜ್ಯದ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ರೈತ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲು ಹರಿಯಾಣದ ಅಂಬಾಲಾ ಜಿಲ್ಲಾ ಪೊಲೀಸರು ಗುರುವಾರ ಕ್ರಮ ಕೈಗೊಂಡಿದ್ದಾರೆ.

ಈ ಕುರಿತು ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ, ಫೆಬ್ರವರಿ 13 ರಿಂದ ನಡೆಯುತ್ತಿರುವ 'ದೆಹಲಿ ಚಲೋ ಪ್ರತಿಭಟನೆ' ಮಧ್ಯೆ ಶಂಭು ಗಡಿಯಲ್ಲಿ ಹಾಕಲಾದ ಬ್ಯಾರಿಕೇಡ್‌ಗಳನ್ನು ಒಡೆಯಲು ಪ್ರತಿಭಟನಾನಿರತ ರೈತರು ಮತ್ತು ಸಂಬಂಧಿತ ಸಂಘಟನೆಗಳಿಂದ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪೊಲೀಸರು ಆರೋಪಿಸಿದ್ದಾರೆ.

'ಪೊಲೀಸರ ಮೇಲೆ ಕಲ್ಲು ತೂರಾಟ ಮತ್ತು ಗದ್ದಲ ಸೃಷ್ಟಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ದೈನಂದಿನ ಪ್ರಯತ್ನಗಳು ನಡೆಯುತ್ತಿವೆ. ಈ ಅವಧಿಯಲ್ಲಿ ಪುಂಡ ಪೋಕರಿಗಳಿಂದ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳಿಗೆ ಸಾಕಷ್ಟು ಹಾನಿಯಾಗಿದೆ. ಪ್ರತಿಭಟನಾಕಾರರಿಂದ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಉಂಟಾದ ಹಾನಿಯನ್ನು ಮೌಲ್ಯಮಾಪನ ಮಾಡಲಾಗುತ್ತಿದೆ' ಎಂದು ಅಂಬಾಲಾ ಪೊಲೀಸರು ತಿಳಿಸಿದ್ದಾರೆ.

ರೈತ ಸಂಘಗಳ ಮುಖಂಡರು ಮತ್ತು ಪ್ರತಿಭಟನಾಕಾರರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) 1980 ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲು ಪ್ರಾರಂಭಿಸಿದ್ದೇವೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.
ಹಿಂಸಾಚಾರದ ಮಾರ್ಗ ಬೇಡ, ಸರ್ಕಾರ ಮಾತುಕತೆಗೆ ಸಿದ್ಧವಿದೆ: ಪ್ರತಿಭಟನಾ ನಿರತ ರೈತರಿಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಹಾನಿಯನ್ನುಂಟುಮಾಡಿದರೆ, ಅವರ ಆಸ್ತಿ ಮತ್ತು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಹಾನಿಯನ್ನು ಸರಿದೂಗಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ಈ ಹಿಂದೆಯೇ ತಿಳಿಸಲಾಗಿತ್ತು.

'ಈ ನಿಟ್ಟಿನಲ್ಲಿ, ರೈತ ಸಂಘಗಳ ಪ್ರತಿಭಟನಾಕಾರರು ಮತ್ತು ಪದಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಪ್ರತಿಭಟನೆಯ ಸಮಯದಲ್ಲಿ ಯಾವುದೇ ಸಾರ್ವಜನಿಕರ ಆಸ್ತಿ ನಷ್ಟ ಉಂಟಾಗಿದ್ದರೆ, ಅಂತವರು ಸ್ಥಳೀಯ ಆಡಳಿತಕ್ಕೆ ನಷ್ಟದ ವಿವರಗಳನ್ನು ನೀಡಬಹುದು' ಎಂದು 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ತಿಳಿಸಿದೆ.

ಫೆಬ್ರುವರಿ 13 ರಂದು ತಮ್ಮ 'ದೆಹಲಿ ಚಲೋ' ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಪ್ರತಿಭಟನಾನಿರತ ರೈತರು ಪಂಜಾಬ್ ಮತ್ತು ಹರಿಯಾಣದ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಗಡಿಗಳಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ರೈತರು ಘರ್ಷಣೆ ನಡೆಸಿದರು.

ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.
ಪ್ರತಿಭಟನಾ ನಿರತ ರೈತ ಸಾವು: ಸಂತ್ರಸ್ತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ; ಪಂಜಾಬ್ ಸಿಎಂ

ಯು-ಟರ್ನ್ ಹೊಡೆದ ಖಟ್ಟರ್ ಸರ್ಕಾರ

ಪ್ರತಿಭಟನಾನಿರತ ರೈತರು ಮತ್ತು ಸಂಬಂಧಿತ ಸಂಘಟನೆಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಂಬಾಲಾ ಪೊಲೀಸರು ಹೇಳಿದ ಗಂಟೆಗಳ ನಂತರ, ಈ ನಿರ್ಧಾರದ ಮರುಪರಿಶೀಲನೆಯ ನಂತರ ಈ ಕ್ರಮವನ್ನು 'ಹಿಂಪಡೆಯಲಾಗಿದೆ' ಎಂದು ಜಿಲ್ಲಾ ಐಜಿಪಿ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾಕಾರರು ಮತ್ತು ರೈತ ಮುಖಂಡರು ಶಾಂತಿಯನ್ನು ಕಾಪಾಡುವಂತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಹರಿಯಾಣ ಪೊಲೀಸರು ಮನವಿ ಮಾಡಿದ್ದಾರೆ.

ಅಂಬಾಲ ವಲಯದ ಐಜಿಪಿ ಸಿಭಾಷ್ ಕಬಿರಾಜ್ ಮಾತನಾಡಿ, ಅಂಬಾಲ ಜಿಲ್ಲೆಯ ಕೆಲವು ರೈತ ಸಂಘಟನೆಗಳ ಮುಖಂಡರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ಮರುಪರಿಶೀಲಿಸಲಾಗಿದ್ದು, ಅದರಡಿ ಪ್ರಕರಣ ದಾಖಲಿಸದಿರಲು ನಿರ್ಧರಿಸಲಾಗಿದೆ ಎಂದು ಎಂದಿದ್ದಾರೆ.

ಎನ್‌ಎಸ್‌ಎ ಕಾಯ್ದೆಯನ್ನು ಜಾರಿಗೊಳಿಸುವ ವಿಚಾರದಲ್ಲಿ ಯು-ಟರ್ನ್‌ ಹೊಡೆದಿರುವುದಕ್ಕೆ ಹರಿಯಾಣ ಸರ್ಕಾರ ಯಾವುದೇ ಕಾರಣವನ್ನು ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com